ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ ನಡೆಸಿದ್ದು, ಗ್ರಾಮದಲ್ಲಿ ಎತ್ತಿನಗಾಡಿಯಲ್ಲಿ ಸಂಚರಿಸುವ ಮೂಲಕ ಗಮನ ಸೆಳೆದಿದ್ದಾರೆ.
Advertisement
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದು, ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್.ಅಶೋಕ್‍ಗೆ ಪೂರ್ಣ ಕುಂಭ, ಜಾನಪದ ಕಲಾತಂಡಗಳೊಂದಿಗೆ ಗ್ರಾಮಸ್ಥರು ಸ್ವಾಗತ ಕೋರಿದ್ದಾರೆ. ಎತ್ತಿನಗಾಡಿಯಲ್ಲೇ ವಾಸ್ತವ್ಯದ ಸ್ಥಳಕ್ಕೆ ತೆರಳಿದ್ದು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವ ಆರ್.ಅಶೋಕ್‍ಗೆ ಶಾಸಕ ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಶ್ರೀನಿವಾಸ್, ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದ್ದಾರೆ.
Advertisement
Advertisement
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬುದು ಸಚಿವ ಆರ್.ಅಶೋಕ್ ಕನಸಿನ ಕಾರ್ಯಕ್ರಮವಾಗಿದ್ದು, ಇದನ್ನು ನೆಲಮಂಗಲ ತಾಲೂಕಿನ ಹೊನ್ನರಾಯನಹಳ್ಳಿಯಲ್ಲಿ ಉದ್ಘಾಟನೆ ಮಾಡಲಾಯಿತು. ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ವಿನೂತನ ಕಾರ್ಯಕ್ರಮ ಇದಾಗಿದೆ. ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದು, ಅರೇಬೊಮ್ಮನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮವಾಸ್ತವ್ಯ ನಡೆಸಲಾಗುತ್ತಿದೆ.