– ರಾಹುಲ್, ಪೃಥ್ವಿ ಶಾ ಆಡಿಸುವುದು ತಂಡಕ್ಕೆ ಬಿಟ್ಟ ವಿಚಾರ
ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ ಓಪನರ್ ಆಗಿ ಕಣಕ್ಕಿಳಿಯುವುದು ಸೂಕ್ತ ಎಂದು ಮಾಸ್ಟರ್ ಬ್ಲಸ್ಟರ್ ಸಚಿನ್ ತೆಂಡೂಲ್ಕರ್ ಅಭಿಪ್ರಾಯಪಟ್ಟಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್, ಏಕದಿನ ಮತ್ತು ಟಿ-20 ಸರಣಿಯನ್ನು ಆಡಲು ಭಾರತ ಪ್ರವಾಸ ಕೈಗೊಂಡಿದೆ. ಈಗಾಗಲೇ ಅಭ್ಯಾಸ ಆರಂಭ ಮಾಡಿರುವ ಟೀಂ ಇಂಡಿಯಾ, ಆಸೀಸ್ ನೆಲದಲ್ಲೇ ಆಸ್ಟ್ರೇಲಿಯಾವನ್ನು ಬಗ್ಗು ಬಡಿಯುವ ತವಕದಲ್ಲಿದೆ. ಹೀಗಿರುವಾಗ ವಿರಾಟ್ ಕೊಹ್ಲಿ ಮೊದಲ ಟೆಸ್ಟ್ ಪಂದ್ಯವಾಡಿ ತವರಿಗೆ ಮರಳಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರೋಹಿತ್ ಶರ್ಮಾ ಮೊದಲ ಎರಡು ಟೆಸ್ಟ್ ಗೆ ಅಲಭ್ಯವಾಗಲಿದ್ದಾರೆ ಎನ್ನಲಾಗಿದೆ.
Advertisement
Advertisement
ಈ ರೀತಿಯ ಸಮಯದಲ್ಲಿ ಸಚಿನ್ ತೆಂಡೂಲ್ಕರ್ ಅವರು ಮಯಾಂಕ್ ಅಗರ್ವಾಲ್ ಟೆಸ್ಟ್ ಇನ್ನಿಂಗ್ಸ್ ಓಪನ್ ಮಾಡುವುದು ಸೂಕ್ತ. ಮಯಾಂಕ್ ನನಗೆ ಗೊತ್ತಿರುವ ಪ್ರಕಾರ ಬಹಳ ಒಳ್ಳೆಯ ಓಪನರ್. ಒಂದು ವೇಳೆ ರೋಹಿತ್ ಕೂಡ ಫಿಟ್ ಆಗಿ ಓಪನ್ ಮಾಡುವಂತಾದರೆ ಭಾರತ ತಂಡಕ್ಕೆ ಒಳ್ಳೆಯ ಆರಂಭ ದೊರೆಯುತ್ತದೆ. ಇವರನ್ನು ಬಿಟ್ಟರೆ ಕೆಎಲ್ ರಾಹುಲ್ ಮತ್ತು ಪೃಥ್ವಿ ಶಾ ಆಡಿಸುವ ನಿರ್ಧಾರ ತಂಡಕ್ಕೆ ಬಿಟ್ಟಿದ್ದು, ಯಾಕೆಂದರೆ ಅವರಿಗೆ ಯಾರು ಫಾರ್ಮ್‍ನಲ್ಲಿ ಇದ್ದಾರೆ ಎಂದು ತಿಳಿದಿರುತ್ತದೆ ಎಂದು ಸಚಿನ್ ಹೇಳಿದ್ದಾರೆ.
Advertisement
Advertisement
ಮಯಾಂಕ್ ಅಗರ್ವಾಲ್ ಅವರು ಕಳೆದ 2018ರಲ್ಲಿ ಆಸ್ಟ್ರೇಲಿಯಾ ವಿರುದ್ಧವೇ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು. ಅಂದು ಪೃಥ್ವಿ ಶಾ ಗಾಯಗೊಂಡ ಕಾರಣ ಅವರ ಜಾಗಕ್ಕೆ ಆಯ್ಕೆಯಾದ ಮಯಾಂಕ್, ಆಡಿದ ಮೊದಲ ಪಂದ್ಯದಲ್ಲೇ ಮೆಲ್ಬರ್ನ್ ಮೈದಾನದಲ್ಲಿ ಅರ್ಧಶತಕ ಸಿಡಿಸಿ ಗಮನ ಸೆಳೆದಿದ್ದರು. ಜೊತೆಗೆ ಈ ಸರಣಿಯಲ್ಲಿ ಒಟ್ಟು 195 ರನ್ ಸಿಡಿಸಿ ನಾನೊಬ್ಬ ಉತ್ತಮ ಟೆಸ್ಟ್ ಆಟಗಾರ ಎಂಬುದನ್ನು ಸಾಬೀತು ಮಾಡಿದ್ದರು.
ಇದರ ಜೊತೆಗೆ ಈ ಬಾರಿಯ ಐಪಿಎಲ್‍ನಲ್ಲಿ ಉತ್ತಮ ಫಾರ್ಮ್ ನಲ್ಲಿದ್ದ ಮಯಾಂಕ್ ಅಗರ್ವಾಲ್, ತಾವಾಡಿದ 11 ಪಂದ್ಯಗಳಿಂದ ಒಂದು ಭರ್ಜರಿ ಶತಕ ಮತ್ತು ಎರಡು ಅರ್ಧಶತಕದ ನೆರವಿನಿಂದ ಬರೋಬ್ಬರಿ 424 ರನ್ ಸಿಡಿಸಿದ್ದರು. ಇದರಿಂದ ಆಸ್ಟ್ರೇಲಿಯಾದಲ್ಲಿ ನಡೆಯುವ ಮೂರು ಮಾದರಿಯ ಪಂದ್ಯಗಳಿಗೆ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದಾರೆ.
ಭಾರತ-ಆಸ್ಟ್ರೇಲಿಯಾ ಪ್ರವಾಸ ನವೆಂಬರ್ 27ರಂದು ಮೂರು ಪಂದ್ಯಗಳ ಏಕದಿನ ಸರಣಿಯೊಂದಿಗೆ ಪ್ರಾರಂಭವಾಗಲಿದೆ. ಏಕದಿನ ಪಂದ್ಯದ ನಂತರ ಉಭಯ ತಂಡಗಳು ಮೂರು ಪಂದ್ಯಗಳ ಟಿ-20 ಸರಣಿ ಆಡಲಿವೆ. ನಂತರ ಡಿಸೆಂಬರ್ 17ರಿಂದ ಇಂಡಿಯಾ ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಪ್ರಾರಂಭವಾಗಲಿದೆ.