ಅಬುಧಾಬಿ: ಹೊಟ್ಟೆ ನೋವಿನ ಕಾರಣದಿಂದ ಆಸ್ಪತ್ರೆ ಸೇರಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ದೈತ್ಯ ಆಟಗಾರ ಕ್ರಿಸ್ ಗೇಲ್ ಅವರು ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಮೂರು ದಿನದ ಹಿಂದೆ ಕ್ರಿಸ್ ಗೇಲ್ ಅವರಿಗೆ ಫುಡ್ ಪಾಯಿಸನ್ ಆಗಿತ್ತು. ಈ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೊಟ್ಟೆನೋವಿನ ಕಾರಣದಿಂದ ಕ್ರಿಸ್ ಗೇಲ್ ಅವರು ಎರಡು ಪಂದ್ಯಗಳಿಂದ ಹೊರಗೆ ಉಳಿಸಿದ್ದರು. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‍ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯಗಳಿಗೆ ಗೇಲ್ ಲಭ್ಯವಿರಲಿಲ್ಲ.
Advertisement
Advertisement
ಆದರೆ ಇಂದು ಗೇಲ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಅಭ್ಯಾಸದ ವೇಳೆ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಗೇಲ್ ಅನಾರೋಗ್ಯಕ್ಕೆ ತುತ್ತಾಗುವ ಮುನ್ನ ಮಾತನಾಡಿದ್ದ ತಂಡದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಅವರು, ಮುಂದಿನ ಸನ್‍ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯದಲ್ಲಿ ಗೇಲ್ ಆಡಲಿದ್ದಾರೆ ಎಂದು ಹೇಳಿದ್ದರು. ಆದರೆ ನಂತರ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆ ಸೇರಿದ್ದರು.
Advertisement
Advertisement
ಇಂದು ಡಿಸ್ಚಾರ್ಜ್ ಆಗಿರುವ ಗೇಲ್ ಅವರು ಮುಂದಿನ ಶುಕ್ರವಾರ ಶಾರ್ಜಾ ಮೈದಾನದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂದ್ಯದಲ್ಲಿ ಗೇಲ್ ಆಡಲಿದ್ದಾರೆ ಎಂದು ಹೇಳಲಾಗಿದೆ. ಆಸ್ಪತ್ರೆ ಸೇರದೆ ಇದ್ದಿದ್ದರೆ ಗೇಲ್ ಕಳೆದ ಎರಡು ಪಂದ್ಯಗಳಲ್ಲೇ ಪ್ಲೇಯಿಂಗ್ ಇಲೆವೆನ್‍ನಲ್ಲಿ ಆಡಬೇಕಿತ್ತು. ಹೀಗಾಗಿ ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಕ್ರಿಸ್ ಗೇಲ್ ಆಡಲಿದ್ದಾರೆ.
ಈಗಾಗಲೇ ಪಂಜಾಬ್ ತಂಡ ಆಡಿರುವ ಏಳು ಪಂದ್ಯಗಳಲ್ಲಿ ಆರು ಪಂದ್ಯಗಳಲ್ಲಿ ಸೋತು ಒಂದು ಪಂದ್ಯ ಗೆದ್ದು ಕೇವಲ 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಮುಂದಿನ ಪಂದ್ಯದಲ್ಲಿ ಬಲಿಷ್ಠ ಆರ್‌ಸಿಬಿ ತಂಡವನ್ನು ರಾಹುಲ್ ಪಡೆ ಎದುರಿಸಲಿದೆ. ಬೆಂಗಳೂರು ತಂಡ ಬ್ಯಾಟಿಂಗ್ ಬೌಲಿಂಗ್ ಎಲ್ಲ ವಿಭಾಗದಲ್ಲೂ ಬ್ಯಾಲೆನ್ಸ್ ಆಗಿ ಕಾಣುತ್ತಿದ್ದು, ಈಗಾಗಲೇ ಆಡಿರುವ ಏಳು ಪಂದ್ಯದಲ್ಲಿ ಎರಡರಲ್ಲಿ ಸೋತು ಐದು ಪಂದ್ಯವನ್ನು ಗೆದ್ದುಕೊಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.