ಚಿಕ್ಕಬಳ್ಳಾಪುರ: ವೈದ್ಯರ ನಿರ್ಲಕ್ಷ್ಯದಿಂದ ಗಂಡು ಮಗು ಸಾವನ್ನಪ್ಪಿರುವ ಆರೋಪವೊಂದು ಕೇಳಿಬಂದಿದೆ.
ಈ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿ ನಡೆದಿದೆ. ವ್ಯಾಕ್ಸಿನ್ ಹಾಕಿ ಆಸ್ಪತ್ರೆಯಿಂದ ಮನೆಗೆ ತೆರಳುತ್ತಿದ್ದಂತೆಯೇ ಮೂರು ತಿಂಗಳ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.
ಪ್ರಮೋದ್ ಹಾಗೂ ಅಪರ್ಣಾ ದಂಪತಿಯ ಗಂಡು ಮಗುವಿಗೆ ಪೇಂಟಾ ರೋಟಾ ಹಾಗೂ ಪೋಲಿಯೊ ವ್ಯಾಕ್ಸಿನ್ ಹಾಕಲಾಗಿತ್ತು. ಆದರೆ ಮನೆಗೆ ತೆರಳುತ್ತಿದ್ದಂತೆಯೇ ಮಾರ್ಗ ಮಧ್ಯೆ ಮಗು ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ಮಗುವಿನ ಪೋಷಕರು ನಂದಿ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಆಸ್ಪತ್ರೆಯ ವೈದ್ಯರು ಹಾಗೂ ನರ್ಸ್‍ಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ತಮ್ಮನ್ನು ಅಗಲಿದೆ ಪುಟ್ಟ ಕಂದಮ್ಮನಿಗಾಗಿ ಕಣ್ಣೀರು ಹಾಕುತ್ತಿದ್ದಾರೆ.