ಬೀದರ್: ನಿಂತ ಜಾಗದಲ್ಲೇ ಟಾಟಾ ಇಂಡಿಕಾ ಕಾರೊಂದು ಏಕಾಏಕಿ ಹೊತ್ತಿ ಉರಿದ ಪರಿಣಾಮ ಭಾಗಶಃ ಸುಟ್ಟು ಕರಕಲಾಗಿರುವ ಘಟನೆ ನಗರದ ಬ್ರೀಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ನಡೆದಿದೆ.
ಬ್ರೀಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿರುವ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಕಾರಿಗೆ ಏಕಾಏಕಿ ಬೆಂಕಿ ತಗುಲಿದೆ. ಪರಿಣಾಮ ಕಾರಿನ ಒಳಭಾಗದಿಂದ ದಟ್ಟ ಹೊಗೆ ಆವರಿಸಿದೆ. ಕೂಡಲೇ ಆಸ್ಪತ್ರೆ ಬಳಿ ಇದ್ದ ಜನರು ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರ ಮೂಲದ ವ್ಯಕ್ತಿಗೆ ಸೇರಿದ್ದ ಕಾರು ಇದಾಗಿದ್ದು, ರೋಗಿಯನ್ನು ಬ್ರೀಮ್ಸ್ ಆಸ್ಪತ್ರೆಗೆ ಕರೆ ತಂದು ಪಾರ್ಕಿಂಗ್ ಮಾಡಲಾಗಿತ್ತು. ಬೆಂಕಿ ಹೊತ್ತಲು ಕಾರಿನಲ್ಲಿ ಉಂಟಾದ ಶಾರ್ಟ್ ಸಕ್ರ್ಯೂಟ್ ಕಾರಣ ಎಂದು ತಿಳಿದು ಬಂದಿದೆ.
ಕಾರಿನಲ್ಲಿ ಯಾರು ಕೂಡ ಇಲ್ಲದೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಹಾಗೆ ಪಾರ್ಕಿಂಗ್ ಸ್ಥಳದಲ್ಲಿ ಹಲವು ವಾಹನಗಳು ಜೊತೆ ನಿಂತಿದ್ದವು ಆದರೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.