ಫುಡ್ ಪಾರ್ಕ್, ಹೈ ಟೆಕ್ ರೇಷ್ಮೆ ಗೂಡು, ಮೀನುಗಾರಿಕೆ ಘಟಕ ಸ್ಥಾಪನೆ

Public TV
6 Min Read
bsy

– ತೋಟಗಾರಿಕೆ ಬೆಳೆ ರಫ್ತಿಗೆ ವಿಮಾನ ನಿಲ್ದಾಣದಲ್ಲಿ ಸೌಲಭ್ಯ
– ಅಡಿಕೆ ಬೆಳೆಯ ಹಳದಿ ರೋಗದ ಬಗ್ಗೆ ಸಂಶೋಧನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ತಮ್ಮ 8ನೇ ಬಜೆಟ್ ಮಂಡಿಸಿದ್ದು, ಕೃಷಿ ವಲಯಕ್ಕೆ ಭರ್ಜರಿ ಕೊಡುಗೆಗಳನ್ನೇ ನೀಡಿದ್ದಾರೆ. ಸಾವಯವ ಕೃಷಿ ಉತ್ತೇಜನಕ್ಕೆ 500 ಕೋಟಿ ರೂ.ಗಳನ್ನು ಮೀಸಲಿರಿಸಿದ್ದು, ಕೃಷಿ ವಲಯಕ್ಕೆ ಒಟ್ಟು 31,028 ಕೋಟಿ ರೂ. ಅನುದಾನವನ್ನು ಮೀಸಲಿರಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಫುಡ್ ಪಾರ್ಕ್ ಸ್ಥಾಪನೆ ಮಾಡುವುದಾಗಿ ಘೋಷಿಸಲಾಗಿದೆ. ಅಲ್ಲದೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿಯನ್ನು ಶೇ.50ಕ್ಕೆ ಹೆಚ್ಚಿಸಲಾಗಿದೆ.

agriculture 1 2

ಕೃಷಿ ಯಾಂತ್ರೀಕರಣ ಯೋಜನೆಯಡಿ ಸಣ್ಣ ಟ್ಯ್ರಾಕ್ಟರ್ ಗಳಿಗೆ ನೀಡುತ್ತಿದ್ದ ಸಹಾಯಧನವನ್ನು 25-45 ಪಿಟಿಒ ಎಚ್‍ಪಿ ಗಳಿಗೆ ವಿಸ್ತರಿಸಲಾಗಿದೆ. ರಾಷ್ಟ್ರೀಯ ಇ-ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಸಾವಯವ ಮತ್ತು ಸಿರಿಧಾನ್ಯಗಳ ವೈಜ್ಞಾನಿಕ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಮುಂದಿನ 5 ವರ್ಷಗಳಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಮಾನ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ 2021-22ನೇ ಸಾಲಿನಲ್ಲಿ 10 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ.

ಆತ್ಮ ನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಆಹಾರ ಸಂಸ್ಕರಣೆ ಹಾಗೂ ಕೊಯ್ಲೋತ್ತರ ನಿರ್ವಹಣಾ ಘಟಕಗಳಿಗೆ ನೀಡುವ ಶೇ.35 ರಷ್ಟು ಸಹಾಯಧನವನ್ನು ಶೇ.50ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರದಿಂದ ಶೇ. 15ರಷ್ಟು ಹೆಚ್ಚುವರಿ ಸಹಾಯಧನಕ್ಕೆ 50 ಕೋಟಿ ರೂ.ಗಳ ಅನುದಾನ ಮೀಸಲಿರಿಸಲಾಗಿದೆ.

MDK Agriculture Farmers 3

ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅಭಿವೃದ್ಧಿ. ಹೊಸ ತಂತ್ರಜ್ಞಾನ, ಹೊಸ ಬೆಳೆ ತಳಿ, ಉತ್ತಮ ನಿರ್ವಹಣಾ ಪದ್ಧತಿಗಳನ್ನು ರೈತರಿಗೆ ಪರಿಚಯಿಸಲು ಪ್ರಾತ್ಯಕ್ಷಿಕಾ ಕ್ಷೇತ್ರಗಳ ಅಭಿವೃದ್ಧಿ. ರೈತ ಉತ್ಪಾದಕರ ಸಂಸ್ಥೆಗಳು ಮಾರಾಟ ಮಾಡುವ ತೋಟಗಾರಿಕೆ ಉತ್ಪನ್ನಗಳಿಗೆ ‘ಬ್ರಾಂಡ್ ವ್ಯಾಲ್ಯೂ’ ಕಲ್ಪಿಸಲು ಹಾಗೂ ಉತ್ತಮ ಮಾರುಕಟ್ಟೆ ಸಂಪರ್ಕ ಒದಗಿಸಲು ಕ್ರಮವಹಿಸಲಾಗಿದೆ.

ರೈತರು ವರ್ಷವಿಡೀ ವರಮಾನ ಪಡೆಯಲು ಸಮಗ್ರ ಕೃಷಿ ಪದ್ಧತಿ ಕಾರ್ಯಕ್ರಮ ಅನುಷ್ಠಾನ. ಅಡಿಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತು ಸಂಶೋಧನೆ ಹಾಗೂ ಪರ್ಯಾಯ ಬೆಳೆ ಪ್ರೋತ್ಸಾಹಿಸಲು 25 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ಹೊಸ ಹೈಬ್ರಿಡ್ ಬೀಜ ನೀತಿ ಜಾರಿಗೆ ಕ್ರಮ ವಹಿಸಲಾಗಿದೆ. ಸುವಾಸನೆಯುಕ್ತ ಮತ್ತು ವೈದ್ಯಕೀಯ ಗಿಡಗಳು, ಹಣ್ಣು ಹಂಪಲು, ತರಕಾರಿಗಳು ಮತ್ತು ಸಂಬಾರು ಪದಾರ್ಥಗಳಿಗೆ ಹೊಸ ಕೃಷಿ ರಫ್ತು ವಲಯ ಸ್ಥಾಪನೆ. ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪೂರಕ ಸೌಲಭ್ಯ.

MDK Agriculture Farmers 2

ಹಣ್ಣು ಮತ್ತು ತರಕಾರಿ ಬೆಳೆಗಳ ಮೌಲ್ಯ ವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ಕಲ್ಪಿಸಲು ಬೆಳೆಗಾರರಿಗೆ ತರಬೇತಿ ಮತ್ತು ತಾಂತ್ರಿಕ ಬೆಂಬಲ. ದ್ರಾಕ್ಷಿ ಕೃಷಿಯ ಉತ್ತೇಜನಕ್ಕೆ ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ ರಚಿಸಲು ಕ್ರಮ ವಹಿಸಲಾಗಿದೆ. ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಇಲಾಖೆಯ ಎಲ್ಲ ಕಚೇರಿಗಳನ್ನು ಒಂದೇ ಸೂರಿನಡಿ ತರಲು 150 ಕೋಟಿ ರೂ. ವೆಚ್ಚದಲ್ಲಿ ರೇಷ್ಮೆ ಭವನ ನಿರ್ಮಾಣ. ರಾಮನಗರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ರೇಷ್ಮೆ ಗೂಡು, ಮಾರುಕಟ್ಟೆ ನಿರ್ಮಾಣ.

ಗೋ ಸಂಪತ್ತಿನ ರಕ್ಷಣೆಗಾಗಿ ಪ್ರತಿ ಜಿಲ್ಲೆಗೆ ಒಂದರಂತೆ ಗೋಶಾಲೆ ಸ್ಥಾಪನೆ. ದೇಶೀಯ ಪಶುಸಂಪತ್ತಿನ ಶಾಶ್ವತ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ತರಬೇತಿ ನೀಡಲು ಹೆಸರಘಟ್ಟದಲ್ಲಿ ಥೀಮ್ ಪಾರ್ಕ್ ಸ್ಥಾಪನೆ. ನಂದಿದುರ್ಗ ಮೇಕೆ ತಳಿಗಳನ್ನು ಅಭಿವೃದ್ಧಿ ಪಡಿಸಿ, ಉತ್ಕೃಷ್ಟ ದರ್ಜೆಯ ಹೋತ ವಿತರಿಸಲು ಒಂದು ಕೋಟಿ ರೂ. ಅನುದಾನ. ‘ಸಮಗ್ರ ಗೋಸಂಕುಲ ಸಮೃದ್ಧಿ’ ಯೋಜನೆಯಡಿ ಒಂದು ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ರೈತರಿಗೆ ಹೊರರಾಜ್ಯದ ದೇಶಿ ತಳಿಗಳನ್ನು ಪರಿಚಯಿಸಲು ಕ್ರಮ ವಹಿಸಲಾಗಿದೆ. ಆಕಸ್ಮಿಕ ಮರಣ ಹೊಂದುವ ಕುರಿ ಮತ್ತು ಮೇಕೆಗಳ ಮಾಲೀಕರಿಗೆ ಪರಿಹಾರಧನ ನೀಡುವ ‘ಅನುಗ್ರಹ ಕೊಡುಗೆ’ ಯೋಜನೆ ಮುಂದುವರಿಕೆ. ಪಶು ವೈದ್ಯಕೀಯ ವಿಜ್ಞಾನದಲ್ಲಿ ಆಯುರ್ವೇದ ಔಷಧಿಗಳ ಅಳವಡಿಕೆ, ಉತ್ತೇಜನಕ್ಕೆ ಶಿವಮೊಗ್ಗದ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ಕಾಲೇಜಿನಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ.

Cow 4

ಯಾತ್ರೀಕೃತ ದೋಣಿಗಳಿಗೆ 1.5 ಲಕ್ಷ ಕಿಲೋಲೀಟರ್ ಡೀಸೆಲ್ ಮೇಲಿನ ಮಾರಾಟ ಕರ ಮರುಪಾವತಿಯ ಬದಲು ಡೀಸೆಲ್ ಡೆಲಿವರಿ ಪಾಯಿಂಟ್‍ನಲ್ಲಿಯೇ ಕರರಹಿತ ದರದಲ್ಲಿ ಡೀಸೆಲ್ ವಿತರಣೆಗೆ ಕ್ರಮ. ‘ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ’ಯ ಕಾರ್ಯಕ್ರಮಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ 62 ಕೋಟಿ ರೂ. ಅನುದಾನ. ರಾಜ್ಯದಲ್ಲಿ 16 ಮೀನುಮರಿ ಉತ್ಪಾದನಾ ಕೇಂದ್ರಗಳ ತಾಂತ್ರಿಕ ಉನ್ನತೀಕರಣಕ್ಕೆ 2 ಕೋಟಿ ರೂ. ಅನುದಾನ. ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಆರು ಕೋಟಿ ರೂ.ಗಳ ವೆಚ್ಚದಲ್ಲಿ ಮೀನು ಉತ್ಪನ್ನಗಳ ಸಂಸ್ಕರಣೆಗೆ ಆಧುನಿಕ ಸಂಸ್ಕರಣಾ ಮತ್ತು ಮೌಲ್ಯವರ್ಧನಾ ಕೇಂದ್ರ ಸ್ಥಾಪನೆ. ರಾಜ್ಯಾದ್ಯಂತ 30 ಕೋಟಿ ರೂ.ಗಳ ವೆಚ್ಚದಲ್ಲಿ ಮೀನು ಮಾರಾಟ ಘಟಕ ಹಾಗೂ ಮತ್ಸ್ಯ ದರ್ಶಿನಿಗಳ ಸ್ಥಾಪನೆ ಕ್ರಮ.

KWR FISHING FISH 2 7

ಕರ್ನಾಟಕ ರಾಜ್ಯ ಉಗ್ರಾಣ ನಿಗಮ, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು (ಪಿಎಸಿಎಸ್), ಟಿಎಪಿಸಿಎಂಎಸ್ ಹಾಗೂ ಇತರೆ ಸಹಕಾರ ಸಂಸ್ಥೆಗಳು ಹೊಂದಿರುವ ಗೋದಾಮುಗಳಲ್ಲಿ ಕೃಷಿ ಉತ್ಪನ್ನಗಳ ಸಂಗ್ರಹಣಾ ಶುಲ್ಕದ ಶೇ.25 ಸಹಾಯಧನ ವಿತರಣೆಗೆ 25 ಕೋಟಿ ರೂ. ಅನುದಾನ. ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು (ಪಿಎಸಿಎಸ್) ಹಾಗೂ ಟಿಎಪಿಸಿಎಂಎಸ್ ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ.11ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ.4ರ ಬಡ್ಡಿ ಸಹಾಯಧನಕ್ಕೆ ಐದು ಕೋಟಿ ರೂ. ಅನುದಾನ.

198 ಕೋಟಿ ರೂ. ವೆಚ್ಚದಲ್ಲಿ 5,500 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಿಗೆ ಗರಿಷ್ಠ 10 ಲಕ್ಷ ರೂ. ವರೆಗೆ ಶೇ.25 ರಷ್ಟು ಷೇರು ಬಂಡವಾಳ ಒದಗಿಸಲು ಕ್ರಮ.

201810072244356111 Punjab govt notifies Divisional Agriculture Debt Settlement SECVPF

ಬೈಯಪ್ಪನಹಳ್ಳಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ. ಸಿಂಗೇನ ಅಗ್ರಹಾರ ಸಮೀಪದ ಗುಳಿಮಂಗಳ ಗ್ರಾಮದಲ್ಲಿ ಅತ್ಯಾಧುನಿಕ ತರಕಾರಿ ಮಾರುಕಟ್ಟೆ ನಿರ್ಮಾಣ. ಬಳ್ಳಾರಿಯ ಆಲದಹಳ್ಳಿ ಗ್ರಾಮದಲ್ಲಿ ಅತ್ಯಾಧುನಿಕ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ. ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆಯ ಸಮಗ್ರ ಅಭಿವೃದ್ಧಿ. ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ‘ಆಧುನಿಕ ಗುಣವಿಶ್ಲೇಷಣಾ ಘಟಕ’ ಸ್ಥಾಪನೆ.

ರಾಜ್ಯದ ನೀರಾವರಿ ಯೋಜನೆಗಳನ್ನು ಆದ್ಯತೆ ಮೇರೆಗೆ ಜಾರಿಗೊಳಿಲು ಕ್ರಮ ವಹಿಸಲಾಗಿದ್ದು, ಪ್ರಮುಖ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ ಹಂತ 3, ಎತ್ತಿನಹೊಳೆ, ಮಹದಾಯಿ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆದ್ಯತೆ. ಕೊಪ್ಪಳ ಜಿಲ್ಲೆ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ ಕ್ರಮ. ಬೇಡ್ತಿ-ವರದಾ ನದಿ ಜೋಡಣೆಯಡಿ ಒಟ್ಟು 22 ಟಿ.ಎಂ.ಸಿ. ನೀರನ್ನು ಬಳಸಿಕೊಳ್ಳಲು ವಿವರವಾದ ಯೋಜನಾ ವರದಿಯನ್ನು ನ್ಯಾಷನಲ್ ಪಸ್ರ್ಪೆಕ್ಟಿವ್ ಪ್ಲಾನ್ ಅಡಿ ಸಿದ್ಧಪಡಿಸಲು ಎನ್‍ಡಬ್ಲ್ಯೂಡಿಎಗೆ ಮನವಿ. ತಾಂತ್ರಿಕ ಸಾಧ್ಯಾ-ಸಾಧ್ಯತೆಗನುಗುಣವಾಗಿ ಯೋಜನೆಗಳನ್ನು ರೂಪಿಸಲು ಕ್ರಮ ವಹಿಸಲಾಗಿದ್ದು, ಇದರಿಂದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನುಕೂಲವಾಗಲಿದೆ. ವಿಶ್ವ ಬ್ಯಾಂಕ್ ನೆರವಿನ ಡ್ರಿಪ್ (ಡಿಆರ್‍ಐಪಿ) ಯೋಜನೆಯಡಿ 1,500 ಕೋಟಿ ರೂ. ಮೊತ್ತದಲ್ಲಿ ರಾಜ್ಯದ 58 ಆಣೆಕಟ್ಟುಗಳ ಪುನಶ್ಚೇತನ ಮತ್ತು ಅಭಿವೃದ್ಧಿಗೆ ಪ್ರಸ್ತಾವನೆ. ಪ್ರಸಕ್ತ ಸಾಲಿನಲ್ಲಿ ಯೋಜನೆ ಅನುಷ್ಠಾನಕ್ಕೆ ಆದ್ಯತೆ. ಏತ ನೀರಾವರಿ ಯೋಜನೆಗಳ ವ್ಯವಸ್ಥಿತ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಕಾರ್ಯನೀತಿ ಜಾರಿ.

mahadayi 1

ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 234 ಕೆರೆಗಳಿಗೆ ಬೆಂಗಳೂರು ನಗರದ ವೃಷಭಾವತಿ ಕಣಿವೆಯಿಂದ ದ್ವಿತೀಯ ಹಂತಕ್ಕೆ ಸಂಸ್ಕರಿಸಿದ 308 ಎಂಎಲ್‍ಡಿ ನೀರು ತುಂಬಿಸುವ 500 ಕೋಟಿ ರೂ. ವೆಚ್ಚದ ಯೋಜನೆ ಅನುಷ್ಠಾನ. ಪಶ್ಚಿಮ ವಾಹಿನಿ ಯೋಜನೆ ಕುರಿತ ಮಾಸ್ಟರ್ ಪ್ಲಾನ್ ಅಡಿ, ಮುಂದಿನ 5 ವರ್ಷಗಳಲ್ಲಿ 3,986 ಕೋಟಿ ರೂ. ವೆಚ್ಚದಲ್ಲಿ 1,348 ಕಿಂಡಿ ಅಣೆಕಟ್ಟು ನಿರ್ಮಾಣ. 2021-22ನೇ ಸಾಲಿನಲ್ಲಿ 500 ಕೋಟಿ ರೂ. ಅನುದಾನ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ನದಿಗಳಲ್ಲಿ ಪ್ರವಾಹ ಮತ್ತು ಭಾರೀ ಅಲೆಗಳಿಂದಾಗಿ ಉಪ್ಪುನೀರು ಹಿಮ್ಮುಖವಾಗಿ ನುಗ್ಗುವುದನ್ನು ಫ್ಲ್ಯಾಪ್ ಗೇಟ್ ಮೂಲಕ ತಡೆಗಟ್ಟುವ ಖಾರ್‍ಲ್ಯಾಂಡ್ ಯೋಜನೆ ಜಾರಿ ಮಾಡಲಾಗಿದೆ. ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಒಟ್ಟಾರೆಯಾಗಿ 31,028 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *