ಇಂಡಸ್ಟ್ರಿ ನಮ್ಮ ಮನೆ, ಇಲ್ಲಿ ಯಾರೂ ದೊಡ್ಡವರು ಚಿಕ್ಕವರಿಲ್ಲ- ದರ್ಶನ್ ವಿರುದ್ಧ ರಕ್ಷಿತಾ ಬೇಸರ

Public TV
3 Min Read
RAKSHITA DARSHAN

ಬೆಂಗಳೂರು: ಚಿತ್ರರಂಗ ನಮ್ಮ ಮನೆ ಇದ್ದಂತೆ. ಇಲ್ಲಿ ಯಾರೂ ದೊಡ್ಡವರಲ್ಲ, ಚಿಕ್ಕವರಲ್ಲ ಎಂದು ನಟಿ ರಕ್ಷಿತಾ ಪ್ರೇಮ್ ಅವರು ದರ್ಶನ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಚಾರದಲ್ಲಿ ನಿರ್ದೇಶಕ ಪ್ರೇಮ್ ಹೆಸರು ಥಳುಕು ಹಾಕಿಕೊಂಡಿದ್ದಕ್ಕೆ ಪ್ರೇಮ್ ಬೇಸರ ಹೊರಹಾಕಿದ ಬೆನ್ನಲ್ಲೇ ರಕ್ಷಿತಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇನ್‍ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿರುವ ರಕ್ಷಿತಾ, ಚಿತ್ರರಂಗದಲ್ಲಿ ಅವರವರ ಕೆಲಸವೇ ಅವರು ಏನೆಂಬುದನ್ನು ಗುರುತಿಸುತ್ತದೆ. ಇಲ್ಲಿ ಎಲ್ಲರನ್ನೂ ಪ್ರೀತಿಸುತ್ತೇವೆ ಹಾಗೆಯೇ ಎಲ್ಲರಿಗೂ ಗೌರವವನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

DARSHAN 2 3 medium

ರಕ್ಷಿತಾ ಬರೆದುಕೊಂಡಿದ್ದೇನು..?
ಕನ್ನಡ ಚಿತ್ರರಂಗ ನಮ್ಮದು, ನಮ್ಮ ಮನೆ ಇದ್ದಂತೆ. ಇಲ್ಲಿ ಯಾರೂ ದೊಡ್ಡವರು ಚಿಕ್ಕವರಿಲ್ಲ. ಎಲ್ಲರೂ ಸಮಾನರು. ಆದರೆ ಅವರವರ ಕೆಲಸವೇ ಅವರು ಏನೆಂಬುದನ್ನು ಗುರುತಿಸುತ್ತದೆ. ಇಲ್ಲಿ ನಾವು ಎಲ್ಲರನ್ನೂ ಪ್ರೀತಿಸುತ್ತೇವೆ. ಹಾಗೆಯೇ ಎಲ್ಲರಿಗೂ ಗೌರ ಕೊಡುತ್ತೇವೆ. ಆದರೆ ಇಂತಹ ಘಟನೆಗಳು ನಡೆದಾಗ ಬೇಸರವಾಗುತ್ತದೆ. ಇಲ್ಲಿ ದುರದೃಷ್ಟಕರ ಕೆಲವೊಂದು ವಿಚಾರಗಳು ತೆರೆದುಕೊಳ್ಳುತ್ತಿರುವುದು ಮನಸ್ಸಿಗೆ ಬೇಸರವನ್ನು ಉಂಟುಮಾಡುತ್ತಿದೆ ಅಂತ ರಕ್ಷಿತಾ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ ಅವ್ರೇ ನನಗ್ಯಾವ ಕೊಂಬೂ ಬರ್ಲಿಲ್ಲ, ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ: ಪ್ರೇಮ್

rakshita medium

ಪ್ರೇಮ್ ಹೇಳಿದ್ದೇನು..?
ಇನ್‍ಸ್ಟಾಗ್ರಾಂ ಖಾತೆಯಲ್ಲಿ, ನನಗೆ ಯಾವ ಕೊಂಬೂ ಬಂದಿಲ್ಲ. ಇನ್ನೊಬ್ರ ಬಗ್ಗೆ ಮಾತನಾಡಬೇಕಾದರೆ ಯೋಚಿಸಿ ಮಾತನಾಡಿ ಎಂದು ದರ್ಶನ್‍ಗೆ ಕಿವಿಮಾತು ಹೇಳಿ, ತಮ್ಮ ಹೆಸರು ಪ್ರಸ್ತಾಪಿಸಿದ್ದಕ್ಕೆ ನಿರ್ದೇಶಕ ಪ್ರೇಮ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂದೇ ಸ್ಟಿಂಗ್ ಆಪರೇಷನ್ ಮಾಡಿದರೂ ನಾನು ಹೆದರಲ್ಲ: ದರ್ಶನ್

DARSHAN PREM medium

ದರ್ಶನ್ ಅವ್ರೆ, ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ ಯಾವ್ ಪುಡಂಗುನೂ ಅಲ್ಲಾ ನಂಗ್ ಕೊಂಬು ಇರ್ಲಿಲ್ಲ.. ನಾನೊಬ್ಬ ಸಾಮಾನ್ಯ ನಿರ್ದೇಶಕ. ರಾಜಕುಮಾರ್ ರವರು, ಅಂಬರೀಷ್ ರವರು, ವಿಷ್ಣುವರ್ಧನ್ ರವರು ಹಾಗೂ ರಜನಿಕಾಂತ್ ರವರು ಒಬ್ಬ ಒಳ್ಳೆ ನಿರ್ದೇಶಕ ಅಂದು ಬೆನ್ನು ತಟ್ಟಿದ್ರು. ಇಡೀ ಕರ್ನಾಟಕ ಜನತೆ ಹರಸಿ ಹಾರೈಸಿ ಹ್ಯಾಟ್ರಿಕ್ ನಿರ್ದೇಶಕ ಅಂತ ಬಿರುದು ಕೊಟ್ಟಾಗ್ಲು ನನಗ್ ಕೊಂಬು ಬರ್ಲಿಲ್ಲ.. ನಾನು ನಂದೇ ಆದ್ ಸ್ಟೈಲ್ ನಲ್ಲಿ ಸಿನಿಮಾ ಮಾಡ್ಕೊಂಡು ಬಂದೋವ್ನು.. ಸುಮಾರು ನಿರ್ಮಾಪಕರುಗಳು ಹಾಗೂ ನಿಮ್ಮ ಅಭಿಮಾನಿಗಳು ಹಾಗೂ ನನ್ನ ಅಭಿಮಾನಿಗಳು ಪ್ರತಿ ಸಾರಿ ದರ್ಶನ್ ಹಾಗೂ ನಿಮ್ಮ ಕಾಂಬಿನೇಶನ್ ನಲ್ಲಿ ಯಾವಾಗ ಚಿತ್ರ ಮಾಡ್ತಿರಂತ ಕೇಳ್ತಾನೆಯಿದ್ರು. ಇದ್ರ ಬಗ್ಗೆ ನಿಮಗೂ ಗೊತ್ತು ನನಗು ಗೊತ್ತು. ಇಬ್ಬರು ಸೇರಿ ಸಿನಿಮಾ ಮಾಡೋದ್ರ ಬಗ್ಗೆ ಚೆರ್ಚೆ ಮಾಡಿದ್ವಿ. ನಾನು ನಮ್ ಬ್ಯಾನರ್ ನಲ್ ಸಿನಿಮಾ ಮಾಡಿ ಇಲ್ಲಾ ನಿಮ್ ಬ್ಯಾನರ್ ನಲ್ ಸಿನಿಮಾ ಮಾಡೋಣ ಅಂತ ಮತ್ತೆ ಚರ್ಚೆ ಮಾಡಿದ್ವಿ. ಆದರೆ ನನಗೆ ಉಮಾಪತಿಯವರು, ನೀವು ಹಾಗೂ ದರ್ಶನ್ ಸೇರಿ ನಂಗ್ ಸಿನಿಮಾ ಮಾಡ್ಕೊಡಿ ಅಂತ ಅಂದ್ರು. ಅದಿಕ್ಕೆ ನಾನು ಉಮಾಪತಿ ಅವ್ರನ್ನ ನಿಮಗೆ ಪರಿಚಯ ಮಾಡಿ.. ಇದನ್ನೂ ಓದಿ: ಇಂದ್ರಜಿತ್ ಅಪ್ಪನಿಗೆ ಹುಟ್ಟಿದವರಾಗಿದ್ರೆ ದಾಖಲೆ ರಿಲೀಸ್ ಮಾಡಲಿ: ದರ್ಶನ್ ನೇರ ಸವಾಲ್

21 prem rakshita

ಮೂರು ಜನ ಸೇರಿ ಸಿನಿಮಾ ಮಾಡೋಣ ಅಂತ ಡಿಸೈಡ್ ಮಾಡಿದ್ವಿ.. ಆದ್ರೆ ನನ್ ದಿ ವಿಲ್ಲನ್ ಸಿನಿಮಾ ಲೇಟ್ ಆದ ಕಾರಣ ನಾನೇ ಉಮಾಪತಿಯವರಿಗೆ ದರ್ಶನ್ ಅವ್ರ ಡೇಟ್ ಇದ್ದ ಕಾರಣ ಬೇರೆ ನಿರ್ದೇಶಕರನ್ನ ಹಿಡಿದು ಸಿನಿಮಾ ಮಾಡಿ ಅಂತ ಹೇಳಿದ್ದೆ.. ನನ್ನ ಸಂಭಾವನೆಯನ್ನ ಉಮಾಪತಿಯವರಿಗೆ ವಾಪಸ್ ನೀಡಿ ರಾಬರ್ಟ್ ಸಿನಿಮಾ ಗೆ ಹಾರೈಸಿದವನು ನಾನು.. ಅದೇ ರೀತಿ ರಾಬರ್ಟ್ ಚಿತ್ರ ಹಿಟ್ ಆಯ್ತು, ಎಲ್ಲರ ಹಾಗೇ ನಾನು ಖುಷಿ ಪಟ್ಟೆ.. ಇದ್ರ ಮದ್ಯೆ ನನ್ ಹೆಸ್ರು ಯಾಕೆ.. ದರ್ಶನ್ ಅವ್ರೆ ನಿರ್ದೇಶಕ್ರು ಯಾವ್ ಪುಡಂಗಿಗಳು ಅಲ್ಲಾ, ಅವ್ರಿಗೆ ಕೊಂಬು ಇರಲ್ಲ.. ತೆರೆಮೇಲೆ ಒಬ್ಬ ನಟನನ್ನ ಹುಟ್ಟಾಕಿ ಅವ್ನಿಗ್ ಕೊಂಬು ಬರ್ಬೇಕಾದ್ರೆ ನಿರ್ದೇಶಕನ ಶ್ರಮ ಎಷ್ಟಿರುತ್ತೆಂತ ಪ್ರತಿಯೊಬ್ಬ ಕಲಾವಿದರಿಗೂ ಗೊತ್ತು ಅದು ನಿಮ್ಗೂ ಗೊತ್ತು.. ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ…

Share This Article
Leave a Comment

Leave a Reply

Your email address will not be published. Required fields are marked *