ಜಕಾರ್ತಾ: ಇಂಡೋನೇಷ್ಯಾದ ಸುಲವೆಸಿ ದ್ವೀಪದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮೂವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಭೂಕಂಪದಲ್ಲಿ ಖಾಸಗಿ ಆಸ್ಪತ್ರೆಯ ಬಿಲ್ಡಿಂಗ್ ಕುಸಿದಿದ್ದು, ಘಟನೆಯಲ್ಲಿ ಸುಮಾರು 12ಕ್ಕೂ ಹೆಚ್ಚು ರೋಗಿಗಳು ಮತ್ತು ಆಸ್ಪತ್ರೆಯ ಸಿಬ್ಬಂದಿ ಭೂ ಕುಸಿತದಲ್ಲಿ ಸಿಲುಕಿದ್ದಾರೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆಸ್ಪತ್ರೆಯು ಸಮತಟ್ಟಾಗಿರುವ ಕಾರಣ ಕಟ್ಟಡ ಕುಸಿದಿದೆ ಎಂದು ಮಾಮುಜು ನಗರದ ಪಾರುಗಾಣಿಕಾ ಸಂಸ್ಥೆಯ ಅರಿಯಾಂಟೋ ತಿಳಿಸಿದ್ದಾರೆ. ಭೂಕಂಪದಿಂದ ಕಟ್ಟಡದ ಅವಶೇಷಗಳಡಿ ಸಿಲುಕಿರುವ ರೋಗಿಗಳನ್ನು ಮತ್ತು ಆಸ್ಪತ್ರೆಯ ಸಿಬ್ಬಂದಿಯನ್ನು ರಕ್ಷಿಸಲು ಎಲ್ಲಾ ರೀತಿಯ ಪ್ರಯತ್ನಗಳು ನಡೆಯುತ್ತಿದೆ ಎಂದು ಹೇಳಿದ್ದಾರೆ.