– ಕೊಡಗು ಎಡಿಸಿಯನ್ನು ತರಟೆಗೆ ತೆಗೆದುಕೊಂಡ ಸೋಮಣ್ಣ
ಮಡಿಕೇರಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ನಡೆಯುತ್ತಿರುವ ಸಭೆಯಲ್ಲಿ ಕೊಡಗು ಎಡಿಸಿಯನ್ನು ಉಸ್ತುವಾರಿ ಸಚಿವ ಸೋಮಣ್ಣ ತರಟೆಗೆ ತೆಗೆದುಕೊಂಡಿದ್ದಾರೆ.
Advertisement
Advertisement
ಇಂದು ಕೊಡಗು ಜಿಲ್ಲಾ ಪಂಚಾಯ್ತಿಯಲ್ಲಿ ನಡೆಯುತ್ತಿರುವ ಟಾಸ್ಕ್ ಪೋಸ್೯ ಸಭೆಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರ ಅಧ್ಯಕ್ಷತೆ ನಡೆಯುತ್ತಿತ್ತು. ಈ ಸಭೆಯಲ್ಲಿ ಈ ಹಿಂದೆ ನಡೆಸಿದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಪ್ರೋಸಿಡಿಂಗ್ ಮಾಡದ ಹಿನ್ನೆಲೆಯಲ್ಲಿ ಕೊಡಗು ಎಡಿಸಿ ರಾಜು ಮೊಘವೀರ್ ಅವರವನ್ನು ಸಚಿವರು ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ಎಡಿಸಿಯಾಗಿ ನಿಮ್ಮ ಕೆಲಸ ಏನು? ನೀವು ಮಾಡುವ ಕೆಲಸ ಎನ್ನಿರುತ್ತೆ..? ಎಂದು ಪ್ರಶ್ನಿಸಿದ್ದಾರೆ.
Advertisement
ಮಡಿಕೇರಿ ಜಿಲ್ಲೆಯಲ್ಲಿ ಕೋವಿಡ್-19ರ ಸೋಂಕು ನಿಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧಿಕಾರಿಗಳು ಮತ್ತು ಇತರೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/4wmvknmOmC
— V. Somanna (@VSOMANNA_BJP) May 14, 2021
Advertisement
ಸರಿಯಾದ ಉತ್ತರ ನೀಡದ ಎಡಿಸಿ ವಿರುದ್ಧ ಗರಂ ಆದರು. ಕೆಲಸ ಮಾಡದೇ ಸುಮ್ಮನೆ ಇರೋದು. ಇಂತಹ ಕೆಲಸ ಮಾಡಲು ಯಾಕೆ ಬರ್ತೀರಾ? ಕತ್ತೆ ಕಾಯಲು ಸಭೆಗೆ ಬರುತ್ತೀರಾ.. ಇನ್ಮುಂದೆ ಸಭೆಯನ್ನು ಲಘುವಾಗಿ ಭಾವಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೋಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.