ರಾಮನಗರ: ರಾಮನಗದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕೊರೊನಾ ರಣಕೇಕೆಗೆ ಕನಕಪುರ ಜನ ಆತಂಕಗೊಂಡಿದ್ದಾರೆ. ಹೀಗಾಗಿ ಇಂದಿನಿಂದ ಕನಕಪುರದಲ್ಲಿ ಸ್ವಯಂ ಪ್ರೇರಿತ ಲಾಕ್‍ಡೌನ್ ಮಾಡಲಾಗಿದೆ.
ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಕನಕಪುರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶ ನೀಡಲಾಗಿದೆ. 11 ಗಂಟೆಯ ನಂತರ ಕನಕಪುರ ಸಂಪೂರ್ಣ ಲಾಕ್‍ಡೌನ್ ಆಗಲಿದೆ. ಲಾಕ್‍ಡೌನ್ ಆಗಿದ್ದ ವೇಳೆ ಜನರು ಓಡಾಟ ಕೂಡ ಮಾಡುವಂತಿಲ್ಲ.
Advertisement
Advertisement
ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಕನಕಪುರ ಲಾಕ್‍ಡೌನ್ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜುಲೈ 1ರ ವರೆಗೂ ಲಾಕ್‍ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ.
Advertisement
ಬೆಳ್ಳಂಬೆಳಗ್ಗೆ ಕನಕಪುರದಲ್ಲಿ ಅಗತ್ಯ ವಸ್ತುಗಳ ಮಾರಾಟ ಜೋರಾಗಿದ್ದು, ಕೆಲ ಅಂಗಡಿಗಳು ಓಪನ್ ಆಗಿವೆ. ಆದರೆ ಅನೇಕ ಅಂಗಡಿಗಳು ಮುಚ್ಚಲಾಗಿದೆ. 11 ಗಂಟೆಯ ಬಳಿಕ ಕನಕಪುರ ಕಂಪ್ಲೀಟ್ ಲಾಕ್‍ಡೌನ್ ಆಗಲಿದೆ. ಹೀಗಾಗಿ ಜನರು ಅಗತ್ಯ ವಸ್ಯಗಳನ್ನು ಖರೀದಿ ಮಾಡುತ್ತಿದ್ದಾರೆ.