ಬೆಂಗಳೂರು: ಇಂದಿನಿಂದ ಜುಲೈ 13 ರವರೆಗೆ ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಜುಲೈ 13ರವರೆಗೆ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ರಾಜ್ಯ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ತೆಂಗು ರಫ್ತಿಗೆ ಅವಕಾಶ, ಮೋದಿ ಸರ್ಕಾರದ ಐತಿಹಾಸಿಕ ನಿರ್ಧಾರ: ಶೋಭಾ ಕರಂದ್ಲಾಜೆ
Advertisement
Advertisement
ಇಂದು ಸಹ ದಕ್ಷಿಣ ಕನ್ನಡ, ಕೋಲಾರ, ಕೊಪ್ಪಳದಲ್ಲಿ ಮಳೆಯಾಗಿದೆ. ಕರಾವಳಿ, ದಕ್ಷಿಣ, ಉತ್ತರ ಒಳನಾಡಿನಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Advertisement
ಜುಲೈ 9, 10, 13 ಆರೆಂಜ್ ಹಾಗೂ ಜುಲೈ 11, 12ರಂದು ರೆಡ್ ಅಲರ್ಟ್‍ನ್ನು ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ 2 ದಿನ ಮಳೆ ಮುನ್ಸೂಚನೆಯಿದೆಯೆಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.