ಬೆಂಗಳೂರು: ಕೊರೊನಾ ಮಧ್ಯೆಯೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಇದೀಗ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಿದೆ.
ರಾಜ್ಯಾದ್ಯಂತ 2 ಲಕ್ಷದ 12 ಸಾವಿರದ 652 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ. ಅದರಲ್ಲಿ 1,29,975 ವಿದ್ಯಾರ್ಥಿಗಳು, 82,677 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. ಇಂದಿನಿಂದ ಸೆಪ್ಟೆಂಬರ್ 19ರವರೆಗೂ ಪರೀಕ್ಷೆ ನಡೆಯಲಿದೆ. ಮೊದಲ ದಿನವಾದ ಇಂದು ಉರ್ದು, ಸಂಸ್ಕೃತ ವಿಷಯಗಳ ಪರೀಕ್ಷೆ ನಡೆಯಲಿದೆ.
ಸುಮಾರು 305 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕೊರೊನಾ ಮಾರ್ಗಸೂಚಿ ಅನ್ವಯದಂತೆಯೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್‌ಎಸ್‌ಎಲ್‌ಸಿ, ಸಿಇಟಿ ಪರೀಕ್ಷೆಗೆ ಇದ್ದ ಮಾರ್ಗಸೂಚಿ ಈ ಪರೀಕ್ಷೆಗೂ ಅನ್ವಯ ಆಗಿದೆ. ಪರೀಕ್ಷೆಗೆ ಈಗಾಗಲೇ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಪರೀಕ್ಷೆಯಲ್ಲಿನ ಅಕ್ರಮ ತಡೆಗೆ ಕ್ರಮ ಕೈಗೊಳ್ಳಲಾಗಿದೆ. 305 ಪರೀಕ್ಷಾ ಕೇಂದ್ರಗಳಿಗೂ ವಿಶೇಷ ಜಾಗೃತ ದಳವನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್‍ಗಳನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ಅಷ್ಟೇ ಅಲ್ಲದೇ ಪರೀಕ್ಷಾ ಕೇಂದ್ರಗಳಿಗೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸುವುದಕ್ಕೂ ನಿರ್ಬಂಧ ಹೇರಲಾಗಿದೆ.