ಇಂದು ಅಂಬರೀಶ್ ಜನ್ಮದಿನ, ಯಾವುದೇ ಸಂಭ್ರಮಾಚರಣೆ ಬೇಡ: ಸುಮಲತಾ

Public TV
2 Min Read
sumlatha

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಜನ್ಮದಿನ. ಪರಿಸ್ಥಿತಿ ಸರಿಯಿದ್ದು, ಅವರು ನಮ್ಮೊಂದಿಗೆ ಇದ್ದಿದ್ದರೆ ಅಭಿಮಾನಿಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದರು. ಆದರೆ, ಅಂಬರೀಶ್ ಈಗ ನಮ್ಮೊಂದಿಗಿಲ್ಲ. ಹೀಗಾಗಿ, ಅವರ ಪತ್ನಿ, ನಟಿ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕಂಠೀರವ ಸ್ಟುಡಿಯೋಗೆ ತೆರಳಿ ಅಂಬರೀಶ್ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ.

AMBAREESH

ರೆಬೆಲ್ ಸ್ಟಾರ್ ಅಂಬರೀಶ್ ಅವರ 69ನೇ ವರ್ಷದ ಹುಟ್ಟುಹಬ್ಬ ಹಿನ್ನಲೆ ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಂಸದೆ ಸುಮಲತಾ ಅಂಬರೀಶ್ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಅಂಬರೀಶ್ ಅವರಿದ್ದಾಗ ಪ್ರತಿ ವರ್ಷ ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಗಳಿಂದ ಬಂದು ಸಂಭ್ರಮದಿಂದ ಆಚರಿಸುತ್ತಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ನಾವೇ ಮಂಡ್ಯಕ್ಕೆ ತೆರಳಿ ಅಲ್ಲಿ ಆಚರಿಸುತ್ತಿದ್ದೇವೆ. ಆದರೆ ಈ ವರ್ಷ ಕೊರೊನಾ ಕಾರಣದಿಂದ ಸಂಭ್ರಮದ ಆಚರಣೆ ಇಲ್ಲ ಎಂದಿದ್ದಾರೆ.

DARSHAN

ಮನೆಯಲ್ಲೇ ಇದ್ದು ಎಲ್ಲರೂ ಆಚರಿಸಿ. ಅವರ ಜೀವನದಿಂದ ಸ್ಫೂರ್ತಿ ಪಡೆದು ಕೆಲಸ ಮಾಡುತ್ತಿದ್ದೇನೆ. ಇಲ್ಲಿಂದ ಈಗ ಮಂಡ್ಯಕ್ಕೆ ತೆರಳಲಿದ್ದೇನೆ. ಅಲ್ಲಿ ಐಸಿಯು ಆನ್ ವೀಲ್ಸ್ ಉದ್ಘಾಟನೆ ಹಾಗೂ ಇತರೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಚಿತ್ರರಂಗಕ್ಕೆ ನೆರವು ಸಂಬಂಧ ಸಿಎಂ ಭೇಟಿ ಮಾಡಿ ಬಂದಿದ್ದೇನೆ, ರಾಜ್ಯ ಸರ್ಕಾರ ಚಿತ್ರರಂಗದ ಸಮಸ್ಯೆಗೆ ಸ್ಪಂದಿಸಬೇಕು ಅನ್ನೋದೆ ನನ್ನ ಮನವಿ ಆಗಿದೆ.

sumalatha2

ರೆಬೆಲ್ ಸ್ಟಾರ್ ಅಂಬರೀಷ್‍ಗೆ ಇಂದು ಹುಟ್ಟುಹಬ್ಬದ ಸಂಭ್ರಮವಾಗಿದೆ. ಮಂಡ್ಯದ ಗಂಡು ನಮ್ಮನ್ನಗಲಿ ಎರಡುವರೆ ವರ್ಷಗಳಾಗಿವೆ. ಅಂಬಿ ನೆನೆಪು ಮಾತ್ರ ಅಭಿಮಾನಿಗಳ ಮನದಲ್ಲಿ ಸದಾ ಇರುತ್ತಾರೆ. ಕಂಠೀರವ ಸ್ಟುಡಿಯೋದಲ್ಲಿನ ಅಂಬಿ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಕೊರೊನಾ ಇರುವುದರಿಂದ ಅಂಬಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳಿ ಸಂಭ್ರಮದಿಂದ ಆಚರಿಸಲು ಅವಕಾಶ ಇರದಿರುವುದು ಅಭಿಮಾನಿಗಳಿಗೆ ಸಖತ್ ಬೇಸರವನ್ನುಂಟು ಮಾಡಿದೆ. ಹೀಗಾಗಿ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅಂಬರೀಶ್ ಅವರ ಫೋಟೋವನ್ನು ಶೇರ್ ಮಾಡುವ ಮೂಲಕವಾಗಿ ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ: ಅಪ್ಪಾಜಿಯ ಭಾಷಾಭಿಮಾನ, ಖಡಕ್ ಜೀವನ ಶೈಲಿ ಎಲ್ಲರಿಗೂ ಸ್ಫೂರ್ತಿ: ದರ್ಶನ್

ನಾಳೆ ನಮ್ಮೆಲ್ಲರ ಪ್ರೀತಿಯ ಅಂಬರೀಶ್ ಅವರ 69ನೇ ಜನ್ಮ ಜಯಂತಿ ಸಂಭ್ರಮದಿಂದ ಆಚರಿಸಲು ನೀವೆಲ್ಲರೂ ಕಾಯುತ್ತಿರುತ್ತೀರಿ. ಆದರೆ ಕೊರೊನಾ ತಡೆಯಲು ದೇಶವೆಲ್ಲ ಶ್ರಮಿಸುತ್ತಿರುವಾಗ ನಾವು ಯಾವುದೇ ಸಾರ್ವಜನಿಕ ಆಚರಣೆ ಅಥವಾ ಸಮಾರಂಭ ಮಾಡುವುದು ಬೇಡವೆಂದು ನನ್ನ ವಿನಮ್ರ ಮನವಿ. ಈ ವರ್ಷ ಅವರನ್ನು ನಮ್ಮ ಮನಸ್ಸು ಮನೆಗಳಲ್ಲೇ ಆಚರಿಸೋಣ ಎಂದು ಅಂಬರೀಶ್ ಪತ್ನಿ, ನಟಿ, ಸಂಸದೆ ಸುಮಲತಾ ಅಂಬರೀಶ್ ಮನವಿ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ನಿನ್ನೆ ಪೋಸ್ಟ್ ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *