ಬೆಂಗಳೂರು: ಜೂನ್ 4 ಹಾಗೂ 5 ರಂದು ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ನಂತರ ತಾತ್ಕಾಲಿಕವಾಗಿ ಮಳೆಯ ಪ್ರಮಾಣ ಕುಂಠಿತವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಮಾತನಾಡಿ, ಕರಾವಳಿ ಜಿಲ್ಲೆಗಳಲ್ಲಿ ಜೂನ್ 4 ರಿಂದ 6 ರವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 5 ರಂದು ಎಲ್ಲೋ ಅಲರ್ಟ್ ಕೊಡಲಾಗಿದೆ ಎಂದರು.
Advertisement
Advertisement
ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜೂನ್ 4, 5 ರಂದು ವ್ಯಾಪಕ ಮಳೆಯಾಗಲಿದೆ. ಧಾರವಾಡ, ಹಾವೇರಿ, ಬಿಜಾಪುರ , ಬಾಗಲಕೋಟೆ , ಬೆಳಗಾವಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಕೋಲಾರ ,ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು ಚಾಮರಾಜನಗರದಲ್ಲಿ ಮಳೆಯಾಗಲಿದ್ದು ಎಲ್ಲೋ ಅಲರ್ಟ್ ಕೊಡಲಾಗಿದೆ ಎಂದು ತಿಳಿಸಿದ್ದಾರೆ.
Advertisement
Advertisement
ಜೂನ್ 4, 5 ರಂದು ಕೊಡಗು, ಶಿವಮೊಗ್ಗ, ಚಿಕ್ಕಮಂಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀಯಿಂದ ಅತಿಭಾರಿ ಮಳೆಯಗಾಉವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಕೊಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದರು.
ಇಂದು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಿದೆ. ಸುಬ್ರಹ್ಮಣ್ಯದಲ್ಲಿ 11 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ 11 ಸೆಂ.ಮೀ, ಸಂಕೇಶ್ವರ ಬೆಳಗಾವಿ ಜಿಲ್ಲೆ 9 ಸೆಂ.ಮೀ, ಕಾರವಾರ, ಕೋಟಾ, ಬಾದಾಮಿಯಲ್ಲಿ, ಬರಗೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ ಎಂದರು.