ಇಂದು ಸಂಜೆ 4 ಗಂಟೆಗೆ ಪಿಯುಸಿ ಫಲಿತಾಂಶ- 5 ಗಂಟೆಗೆ ಆನ್‍ಲೈನ್‍ನಲ್ಲೂ ಲಭ್ಯ

Public TV
1 Min Read
PUC

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ಇಲ್ಲದೆ ಪಾಸ್ ಆಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಇಂದು ಪ್ರಕಟವಾಗಲಿದೆ.

ಇಂದು ಸಂಜೆ 4 ಗಂಟೆಗೆ ಪಿಯುಸಿ ಬೋರ್ಡ್ ನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಇಲಾಖೆ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

PUC 3

ಕೊರೊನಾ ಹಿನ್ನೆಲೆ ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದೇ ಎಲ್ಲಾ ವಿದ್ಯಾರ್ಥಿಗಳನ್ನ ಪಾಸ್ ಮಾಡಲಾಗಿತ್ತು. ಅಂಕಗಳನ್ನು ನೀಡಲು ವಿದ್ಯಾರ್ಥಿಯು ಎಸ್‍ಎಸ್‍ಎಲ್‍ಸಿಯಲ್ಲಿ ಪಡೆದ ಅಂಕಗಳಲ್ಲಿ ಶೇ.45 ಅಂಕ, ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳಲ್ಲಿ ಶೇ.45 ಅಂಕ ಹಾಗೂ ಶೇ.10 ಅಂಕ ಇಂಟರ್ನಲ್ ಅಸೆಸ್ಮೆಂಟ್ ಅಂಕಗಳನ್ನು ಸೇರಿಸಿ ಫಲಿತಾಂಶ ನೀಡಲಾಗ್ತಿದೆ. ಇದನ್ನೂ ಓದಿ: ನೀಲಿ ಚಿತ್ರ ನಿರ್ಮಾಣ – ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್

PUC 2

ಗ್ರೇಡ್ ಬದಲಿಗೆ ಅಂಕಗಳ ಮಾದರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. 600 ಅಂಕಗಳಿಗೆ ಫಲಿತಾಂಶ ಪ್ರಕಟ ಮಾಡಲಾಗುತ್ತೆ. ಒಂದು ವೇಳೆ ಫಲಿತಾಂಶದ ಬಗ್ಗೆ ಆಕ್ಷೇಪ ಇರೋ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಫ್ರೆಶ್ ಅಭ್ಯರ್ಥಿಗಳು ಮತ್ತು ರಿಪೀಟರ್ಸ್ ಅಭ್ಯರ್ಥಿಗಳು ಸೇರಿ ಸುಮಾರು 5.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಇಂದು ಪ್ರಕಟವಾಗಲಿದೆ.

ವೆಬ್‍ಸೈಟ್: https://karresults.nic.in/

PUC 1

Share This Article
Leave a Comment

Leave a Reply

Your email address will not be published. Required fields are marked *