ಇಂದು ಹಸೆಮಣೆ ಏರಬೇಕಿದ್ದ ವರ ಕೊರೊನಾಗೆ ಬಲಿ

Public TV
0 Min Read
CKM 6

ಚಿಕ್ಕಮಗಳೂರು: ಇಂದು ಹಸೆಮಣೆ ಏರಬೇಕಿದ್ದ ಯುವಕ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಪೃಥ್ವಿರಾಜ್(32) ಕೊರೊನಾ ಸೋಂಕಿಗೆ ಬಲಿಯಾದ ಯುವಕ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ.

FotoJet 11 2

ಇಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಪೃಥ್ವಿರಾಜ್, ಬೆಂಗಳೂರಿನಿಂದ ಹತ್ತು ದಿನಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದರು. ಆದರೆ ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವರನ ಅಕಾಲಿಕ ನಿಧನದಿಂದಾಗಿ ಸಂಭ್ರಮ ನೆಲೆಸಬೇಕಿದ್ದ ಮನೆಯಲ್ಲೀಗ ಸೂತಕದ ಛಾಯೆ ಆವರಿಸಿದೆ.

corona virus 2

Share This Article
Leave a Comment

Leave a Reply

Your email address will not be published. Required fields are marked *