ಬೆಂಗಳೂರು: ಇಂದು ಕರ್ನಾಟಕದಲ್ಲಿ 1,222 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 1,039 ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,07,123ಕ್ಕೆ ಏರಿಕೆ ಆಗಿದೆ. ಈ ಪೈಕಿ 8,79,735 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 15,380 ಸಕ್ರಿಯ ಪ್ರಕರಣಗಳಿವೆ.
ಇಲ್ಲಿಯವರೆಗೆ ಒಟ್ಟು 11,989 ಮಂದಿ ಕೊರೊನಾಗೆ ಬಲಿಯಾಗಿದ್ದು, ಸದ್ಯ 223 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 13,548 ಆಂಟಿಜನ್ ಟೆಸ್ಟ್, 90,993 ಆರ್ಟಿ ಪಿಸಿಆರ್ ಸೇರಿದಂತೆ 1,04,541 ಪರೀಕ್ಷೆ ಮಾಡಲಾಗಿದೆ. ಒಟ್ಟು ರಾಜ್ಯದಲ್ಲಿ ಇಲ್ಲಿಯವರೆಗೆ 1,28,22,390 ಕೊರೊನಾ ಪರೀಕ್ಷೆ ಮಾಡಲಾಗಿದೆ.
ಎಂದಿನಂತೆ ಬೆಂಗಳೂರು ನಗರದಲ್ಲಿ 687 ಮಂದಿಗೆ ಸೋಂಕು ಬಂದಿದ್ದು 4 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಮೈಸೂರು 61, ಹಾಸನ 46, ತುಮಕೂರು 43 ಮಂದಿಗೆ ಸೋಂಕು ಬಂದಿದೆ.
ಐಸಿಯುನಲ್ಲಿಒಟ್ಟು 223 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 106, ತುಮಕೂರು 14, ಕಲಬುರಗಿಯಲ್ಲಿ 13 ಮಂದಿ ಇದ್ದಾರೆ.