– ಬೆಂಗಳೂರಿನಲ್ಲಿ 7,494
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿಧಾನವಾಗಿ ಕಡಿಮೆಯಾಗುತ್ತಿದ್ದು, ಕರ್ನಾಟಕದಲ್ಲಿ ಇಂದು 25,979 ಮಂದಿಗೆ ಸೋಂಕು ತಗುಲಿದ್ದು, 626 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 35,573 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
ಇಂದು 25,979 ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,72,986ಕ್ಕೆ ತಲುಪಿದೆ. ಇಂದು 626 ಜನ ಕೊರೊನಾಗೆ ಬಲಿಯಾಗಿದ್ದು, ಈ ವರೆಗೆ ಒಟ್ಟು 25,282 ಜನ ಸಾವನ್ನಪ್ಪಿದ್ದಾರೆ. ಈ ವರೆಗೆ ಒಟ್ಟು 24,34,904 ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ.
Advertisement
Advertisement
ಇಂದು 35,573 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವರೆಗೆ ಒಟ್ಟು 19,26,615 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿನ ಖಚಿತ ಪ್ರಮಾಣ ಶೇ.20.76ರಷ್ಟಿದ್ದು, ಮೃತರ ಪ್ರಮಾಣ ಶೇ.2.40ರಷ್ಟಿದೆ. ಇಂದು 17,848 ಆಂಟಿಜನ್ ಟೆಸ್ಟ್, 1,07,269 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 1,25,117 ಕೊರೊನಾ ಪರೀಕ್ಷೆ ಮಾಡಲಾಗಿದೆ. ಇಂದು ರಾಜ್ಯದಲ್ಲಿ ಒಟ್ಟು 34,360 ಮಂದಿಗೆ ಲಸಿಕೆ ನೀಡಲಾಗಿದೆ.
Advertisement
ಬೆಂಗಳೂರಿನಲ್ಲಿ 7,494 ಮಂದಿಗೆ ಕೊರೊನಾ ದೃಢಪಟ್ಟಿದ್ದು, 362 ಜನ ಸಾವನ್ನಪ್ಪಿದ್ದಾರೆ. ಇನ್ನೂ 2,55,842 ಸಕ್ರಿಯ ಪ್ರಕರಣಗಳಿವೆ. ಮೈಸೂರು 2,222, ಹಾಸನ 1,618, ತುಮಕೂರು 1,269, ಬಳ್ಳಾರಿ 1,190 ಹಾಗೂ ಬೆಳಗಾವಿಯಲ್ಲಿ 1,066 ಪ್ರಕರಣಗಳು ವರದಿಯಾಗಿವೆ.