ಬೆಂಗಳೂರು: ಇಂದು ಕರ್ನಾಟಕದಲ್ಲಿ ಒಟ್ಟು 29,744 ಮಂದಿಗೆ ಕೊರೊನಾ ಬಂದಿದ್ದು, ರಾಜ್ಯಾದ್ಯಂತ ಒಟ್ಟು 201 ಜನ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 16,545 ಮಂದಿಗೆ ಕೊರೊನಾ ದೃಢಪಟ್ಟಿದ್ದು, 105 ಜನ ಬಲಿಯಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,81,042 ಕ್ಕೆ ಏರಿಕೆ ಕಂಡಿದೆ. ಇಂದು ರಾಜ್ಯದಲ್ಲಿ ಒಟ್ಟು 1,37,901 ಮಂದಿಗೆ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,68,945 ಕ್ಕೆ ಏರಿಕೆ ಕಂಡಿದೆ. ಈ ಪೈಕಿ 10,73,257 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಒಟ್ಟು ಇಲ್ಲಿಯವರೆಗೆ 14,627 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 1815 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 10,792 ಆಂಟಿಜನ್ ಟೆಸ್ಟ್ 1,55,615 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 1,66,407 ಕೊರೊನಾ ಪರೀಕ್ಷೆ ಮಾಡಲಾಗಿದೆ.
ಮೈಸೂರು 1563, ತುಮಕೂರು 1197, ಮಂಡ್ಯ 929, ಕಲಬುರಗಿ 872, ಹಾಸನ 747, ರಾಯಚೂರಿನ 609 ಮಂದಿಗೆ ಸೋಂಕು ಬಂದಿದೆ. ಒಟ್ಟು 1815 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 590, ಕಲಬುರಗಿ 265, ತುಮಕೂರು 149, ಧಾರವಾಡ 122 ಶಿವಮೊಗ್ಗ 87 ಮತ್ತು ದಾವಣಗೆರೆಯಲ್ಲಿ 86 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.