ಬೆಂಗಳೂರು: ಇಂದು ಕರ್ನಾಟಕದಲ್ಲಿ ಒಟ್ಟು 38,603 ಮಂದಿಗೆ ಕೊರೊನಾ ಬಂದಿದ್ದು, ರಾಜ್ಯಾದ್ಯಂತ ಒಟ್ಟು 476 ಜನ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 13,338 ಮಂದಿಗೆ ಕೊರೊನಾ ದೃಢಪಟ್ಟಿದ್ದು, 239 ಜನ ಬಲಿಯಾಗಿದ್ದಾರೆ.
ಇಂದು 6,424 ಆಂಟಿಜನ್ ಟೆಸ್ಟ್ 90,812 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 97,236 ಕೊರೊನಾ ಪರೀಕ್ಷೆ ಮಾಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 6,03,639ಕ್ಕೆ ಏರಿಕೆ ಕಂಡಿದೆ.
ಇಂದು ರಾಜ್ಯದಲ್ಲಿ ಒಟ್ಟು 67,582 ಮಂದಿಗೆ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22,42,065 ಕ್ಕೆ ಏರಿಕೆ ಕಂಡಿದೆ. ಈ ಪೈಕಿ 16,16,092 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಇಲ್ಲಿಯವರೆಗೆ 22,313 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಹಾಸನ 2,324, ಬಳ್ಳಾರಿ 2,322, ಮೈಸೂರು 1,980, ತುಮಕೂರು 1,915, ಬೆಳಗಾವಿ 1,748, ಶಿವಮೊಗ್ಗ 1,322, ಉತ್ತರ ಕನ್ನಡ 1,288 ಮತ್ತು ಮಂಡ್ಯದಲ್ಲಿ 1,087 ಮಂದಿಗೆ ಕೊರೊನಾ ಬಂದಿದೆ.