ಬೆಂಗಳೂರು: ಇದೇ ಮೊದಲ ಬಾರಿಗೆ ವಿಶ್ವದಾದ್ಯಂತವಿರುವ ಮೂವತ್ತಕ್ಕೂ ಹೆಚ್ಚು ದೇಶಗಳ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಒಂದೇ ದಿನ ಒಂದೇ ಧ್ವನಿಯೊಂದಿಗೆ ಟ್ವಿಟರ್ ಮತ್ತು ಇ-ಮೇಲ್ ಮೂಲಕ ಕರ್ನಾಟಕ ಸರ್ಕಾರಕ್ಕೆ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸುವ ಟ್ವಿಟರ್ ಅಭಿಯಾನವನ್ನು ಇಂದು ಜನವರಿ 2 ರಂದು ಮಧ್ಯಾಹ್ನ 4ಗಂಟೆಗೆ ನಡೆಸಲು ತೀರ್ಮಾನಿಸಿದ್ದೇವೆ.
Advertisement
‘ಎನ್‍ಆರೈ ಅಪೀಲ್ ಡೇ’ #NRIappealDay ಎಂಬ ಹ್ಯಾಷ್’ಟ್ಯಾಗ್ ನೊಂದಿಗೆ ಜನವರಿ 2ನೇ ದಿನವನ್ನು ಅಂತರಾಷ್ಟ್ರೀಯ ಅನಿವಾಸಿ ಕನ್ನಡಿಗರ ಮನವಿ ದಿನವಾಗಿ ಆಚರಿಸಲು ತೀರ್ಮಾನಿಸಿದ್ದು, ನಾವು ಕರೆಕೊಟ್ಟಿರುವ ಈ ಅಭಿಯಾನಕ್ಕೆ ಈಗಾಗಲೇ ಅಮೆರಿಕ, ಯುಎಇ, ಬ್ರಿಟನ್, ಆಸ್ಟ್ರೇಲಿಯಾ, ಕತಾರ್, ಕುವೈಟ್, ಇಟಲಿ, ಜರ್ಮನಿ, ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡಾ, ಇಥಿಯೋಪಿಯ, ಡೆನ್ಮಾರ್ಕ್, ನೈಜೀರಿಯಾ, ಹಾಲೆಂಡ್, ಓಮನ್, ಬಹರೈನ್, ಇಂಡೋನೇಷಿಯಾ, ಸೌದಿ ಅರೇಬಿಯಾ, ಇಸ್ರೇಲ್, ಈಜಿಪ್ಟ್, ಸ್ವಿಜಲ್ರ್ಯಾಂಡ್, ಘಾನ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಹಾಂಕಾಂಗ್, ಸಿಂಗಪೂರ್, ಸ್ಕಾಟ್ಲ್ಯಾಂಡ್, ನಾರ್ವೆ, ನೆದಲ್ರ್ಯಾಂಡ್, ಸೌತ್ ಕೊರಿಯಾ ಇನ್ನಿತರ ದೇಶದ ನೂರಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಈಗಾಗಲೇ ಬೆಂಬಲ ಘೋಷಿಸಿದ್ದಾರೆ’ ಎಂದು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಇದರ ಸಂಚಾಲಕ ಹಿದಾಯತ್ ಅಡ್ಡೂರ್ ತಿಳಿಸಿದ್ದಾರೆ.
Advertisement
Advertisement
ಅನಿವಾಸಿ ಕನ್ನಡಿಗರ ನಾಲ್ಕು ಪ್ರಮುಖ ಬೇಡಿಕೆಗಳು:
1) ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಗೆ ಉಪಾಧ್ಯಕ್ಷರನ್ನ ಕೂಡಲೇ ನೇಮಿಸಬೇಕು.
2) ಉಪಾಧ್ಯಕ್ಷ ಸ್ಥಾನಕ್ಕೆ ಅನಿವಾಸಿಗಳ ಕಷ್ಟ ಬಲ್ಲ ಒಬ್ಬ ಅನಿವಾಸಿ ಕನ್ನಡಿಗರನ್ನೇ ನೇಮಿಸಬೇಕು.
3) ನೆನೆಗುದಿಗೆ ಬಿದ್ದಿರುವ ಎನ್.ಆರ್.ಕೆ ಕಾರ್ಡ್ ಯೋಜನೆಯನ್ನು ತ್ವರಿತವಾಗಿ ಜಾರಿಗೆಗೊಳಿಸುವುದು.
4) ಹೆಚ್ಚು ಅನಿವಾಸಿ ಕನ್ನಡಿಗರ ಸಾಂದ್ರತೆ ಇರುವ ದೇಶಗಳಲ್ಲಿ ಕನ್ನಡ ಭವನ ನಿರ್ಮಾಣ ಮಾಡಿ ಕನ್ನಡ ಪಾಠಶಾಲೆ ನಡೆಸಲು ವ್ಯವಸ್ಥೆ ಮಾಡಬೇಕು.
Advertisement