– ಒಟ್ಟು 285 ಕೊರೊನಾ ಪಾಸಿಟಿವ್
ಯಾದಗಿರಿ: ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳ ಪೈಕಿ ಭಾನುವಾರ ಪಾಸಿಟಿವ್ ಬಂದ 44 ಪ್ರಕರಣ ಸೇರಿದಂತೆ ಮೇ 31ರವರೆಗೆ ಒಟ್ಟು 285 ವರದಿ ಪಾಸಿಟಿವ್ ಬಂದಿವೆ. ಇದರೊಂದಿಗೆ ರಾಜ್ಯದಲ್ಲಿ ಅತಿ ಹೆಚ್ಚು ಕೋವಿಡ್-19 ಪ್ರಕರಣ ವರದಿಯ ಜಿಲ್ಲೆಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.
ಜಿಲ್ಲೆಯಲ್ಲಿ ಇಂದು 355 ಮಂದಿಯ ವರದಿ ನೆಗೆಟಿವ್ ಬಂದಿದ್ದು, ಈವರೆಗೆ ಜಿಲ್ಲೆಯಲ್ಲಿ 7,463 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಕಳುಹಿಸಲಾದ 1,132 ಮಾದರಿಗಳು ಸೇರಿದಂತೆ 9,483 ಮಾದರಿಗಳ ವರದಿ ಬರಬೇಕಿದೆ. ಇನ್ನೂ ಯಾದಗಿರಿ ಜಿಲ್ಲೆ ವೇಗವಾಗಿ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆಯಲ್ಲಿ, ರಾಜ್ಯದಲ್ಲಿ 2ನೇ ಸ್ಥಾನ ಪಡೆದಿದ್ದು, ಇದರಿಂದ ಜಿಲ್ಲೆಯ ಜನರ ಆತಂಕ ತೀವ್ರಗೊಂಡಿದೆ.
Advertisement
ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ 285 ವ್ಯಕ್ತಿಗಳ ಪೈಕಿ 28 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. ಉಳಿದ 256 ಪ್ರಕರಣಗಳು ಸಕ್ರಿಯವಾಗಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 672 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 1,913 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 5 ಕಂಟೇನ್‍ಮೆಂಟ್ ಝೋನ್‍ಗಳನ್ನು ರಚಿಸಲಾಗಿದೆ.