ಬೆಂಗಳೂರು: ಇಂದು ಕರ್ನಾಟಕದಲ್ಲಿ 810 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 743 ಜನ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ.
ಬ್ರಿಟನ್‌ನಿಂದ ಬಂದವರ ಪೈಕಿ ಇಂದು ಯಾರಿಗೂ ಪರೀಕ್ಷೆ ನಡೆಸಿಲ್ಲ. 64 ಮಂದಿಯ ಫಲಿತಾಂಶ ಲಭ್ಯವಾಗಬೇಕಿದೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,21,938ಕ್ಕೆ ಏರಿಕೆ ಆಗಿದೆ. ಈ ಪೈಕಿ 8,98,919 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 10,893 ಸಕ್ರಿಯ ಪ್ರಕರಣಗಳಿವೆ.
ಒಟ್ಟು ಇಲ್ಲಿಯವರೆಗೆ 12,107 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 186 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 8,992 ಆಂಟಿಜನ್ ಟೆಸ್ಟ್, 1,12,905 ಆರ್‌ಟಿ ಪಿಸಿಆರ್ ಸೇರಿದಂತೆ ಒಟ್ಟು 1,21,897 ಪರೀಕ್ಷೆ ಮಾಡಲಾಗಿದೆ. ಸಎಂದಿನಂತೆ ಬೆಂಗಳೂರು ನಗರದಲ್ಲಿ 464 ಮಂದಿಗೆ ಸೋಂಕು ಬಂದಿದ್ದು 4 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಮೈಸೂರು 43, ಚಿಕ್ಕಬಳ್ಳಾಪುರ 32, ದಕ್ಷಿಣ ಕನ್ನಡ 30,
ಐಸಿಯುನಲ್ಲಿಒಟ್ಟು 186 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 81, ಕಲಬುರಗಿಯಲ್ಲಿ 11, ಗದಗದಲ್ಲಿ 10 ಮಂದಿ ಇದ್ದಾರೆ.