ಬೆಂಗಳೂರು: ಮಾಜಿ ಸಚಿವ ಜಮೀರ್ ಅಹಮದ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಐಎಂಎ ಗೋಲ್ಡ್‌ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿದ್ದ ಶಾಸಕ ಜಮೀರ್!
Advertisement
Advertisement
ಇಡಿ ದಾಳಿ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎರಡು ವರ್ಷದ ಹಿಂದೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದ್ದರು. ಎಲ್ಲದಕ್ಕೂ ಉತ್ತರ ಕೊಟ್ಟಿದ್ದೆ ಎಂದು ಜಮೀರ್ ಹೇಳಿದ್ದರು. ಈಗ ದಾಳಿ ನಡೆಯುವ ಅವಶ್ಯಕತೆ ಇರಲಿಲ್ಲ. ಈಗ ಕಿರುಕುಳ ನೀಡುತ್ತಿರೋದು ಯಾಕೆ? ಈ ಕಿರುಕುಳ ಹೇಗೆ ಇರುತ್ತೆ ನಂಗೂ ಗೊತ್ತಿದೆ. ಈಗ ತೊಂದರೆ ಕೊಡುತ್ತಿರುವುದು ಸರಿ ಇಲ್ಲ. ಯಾರ ಅನುಕೂಲಕ್ಕೆ ಈ ದಾಳಿ ನಡೆದಿದೆ ಗೊತ್ತಿಲ್ಲ ಎಂದರು. ಇದೇ ವೇಳೆ ಮಾಜಿ ಸಚಿವ ರೋಷನ್ ಬೇಗ್ ನಿವಾಸದ ಮೇಲಿನ ಇಡಿ ದಾಳಿಗೆ ಪ್ರತಿಕ್ರಿಯಿಸಲು ಹಿಂದೇಟು ಹಾಕಿದರು. ಇದನ್ನೂ ಓದಿ: ಧರ್ಮ ಒಡೆದು, ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದೀರಾ, ಮುಂದೆಯೂ ಅದೇ ಮಾಡಬೇಡಿ: ಶೃಂಗೇರಿ ಶಾಸಕ ರಾಜೇಗೌಡ