ಶಿವಮೊಗ್ಗ: ಇದು ಬಿಜೆಪಿನಾ ಎಂದು ಅನುಮಾನ ಹುಟ್ಟುತ್ತಿದೆ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆ, ಶಾಸಕರ ವರ್ತನೆ ಬೇಸರ ತರಿಸಿದೆ. ಇದು ಬಿಜೆಪಿನಾ ಎಂಬ ಅನುಮಾನ ಹುಟ್ಟುತ್ತಿದೆ. ಅಸಮಾಧಾನ ಇರುವುದು ನಿಜ ಎಂದು ತಿಳಿಸಿದ್ದಾರೆ.
ಇರುವ ಅಸಮಾಧಾನವನ್ನು ಎಲ್ಲಿ ಸರಿಪಡಿಸಿಕೊಳ್ಳಬೇಕೋ ಅಲ್ಲಿ ಸರಿಪಡಿಸಿಕೊಳ್ಳಬೇಕು. ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ ಮಾತನಾಡಿದರೆ ಬಗೆಹರಿಯುತ್ತದೆಯಾ. ಯಡಿಯೂರಪ್ಪ ಅವರ ಮೇಲೆ ಆರೋಪ ಮಾಡೋದು, ಅವರ ಕುಟುಂಬದವರ ಮೇಲೆ ಆರೋಪ ಮಾಡೋದು ಸರಿಯಲ್ಲ. ಈ ಎಲ್ಲಾ ಬೆಳವಣಿಗೆಯನ್ನು ಹೈಕಮಾಂಡ್ ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.