ಇನ್ನು ಕೇವಲ 7ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್: ಶಿವಮೊಗ್ಗ ಡಿಸಿ

Public TV
1 Min Read
SMG SEAL DOWN 3

– ಸೂಕ್ಷ್ಮ ರಾಜ್ಯಗಳಿಂದ ಬಂದವರಿಗೆ ಮಾತ್ರ ಸಾಂಸ್ಥಿಕ ಕ್ವಾರಂಟೈನ್
– ಉಳಿದ ರಾಜ್ಯಗಳಿಂದ ಬಂದವರಿಗೆ ಹೋಮ್ ಕ್ವಾರಂಟೈನ್

ಶಿವಮೊಗ್ಗ: ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ಹೊರ ರಾಜ್ಯಗಳಿಂದ ಬಂದಿರುವವರು 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಪೂರ್ಣಗೊಳಿಸಿದರೆ ಅವರನ್ನು ಬಿಡುಗಡೆಗೊಳಿಸಿ ಹೋಮ್ ಕ್ವಾರಂಟೈನ್‍ಗೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದರು. ಇದುವರೆಗೆ ಹೊರ ರಾಜ್ಯಗಳಿಂದ ಬಂದವರಿಗೆ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ವಿಧಿಸಲಾಗುತ್ತಿದ್ದು, ಹೊಸ ಮಾರ್ಗಸೂಚಿ ಪ್ರಕಾರ ಇದನ್ನು 7 ದಿನಗಳಿಗೆ ಇಳಿಸಲಾಗಿದೆ. ಪ್ರಸ್ತುತ ವಿವಿಧ ಹಾಸ್ಟೆಲ್‍ಗಳಲ್ಲಿ 553 ಮಂದಿ ಕ್ವಾರಂಟೈನ್‍ನಲ್ಲಿದ್ದಾರೆ. ಪ್ರತಿ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ 7 ದಿನಗಳ ಅವಧಿ ಪೂರ್ಣಗೊಳಿಸಿರುವವರ ಆರೋಗ್ಯ ತಪಾಸಣೆ ನಡೆಸಿ ಕೈಗೆ ಸೀಲು ಹಾಕಿ ಹೋಮ್ ಕ್ವಾರಂಟೈನ್‍ಗೆ ಕಳುಹಿಸಬೇಕು. ಇದಕ್ಕಾಗಿ ಪ್ರತಿ ತಾಲೂಕಿಗೆ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗುವುದು ಎಂದರು.

Corona Virus 4 1

ಮುಂದಿನ ದಿನಗಳಲ್ಲಿ ಹೋಮ್ ಕ್ವಾರಂಟೈನ್‍ಗೆ ಒಳಗಾಗುವವರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಅಂತಹವರ ಮೇಲೆ ನಿರಂತರ ನಿಗಾ ಇರಿಸಬೇಕು. ಅವರ ಪಟ್ಟಿಯನ್ನು ಸಂಬಂಧಪಟ್ಟ ಪಿಡಿಒ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಳುಹಿಸಬೇಕು ಎಂದು ತಿಳಿಸಿದರು.

ಸೂಕ್ಷ್ಮ ರಾಜ್ಯಗಳೆಂದು ಗುರುತಿಸಲಾಗಿರುವ ರಾಜ್ಯಗಳಿಂದ ಆಗಮಿಸುವವರನ್ನು ಮಾತ್ರ ಇನ್ನು ಮುಂದೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲಾಗುವುದು. ಇನ್ನುಳಿದ ರಾಜ್ಯಗಳಿಂದ ಬರುವವರನ್ನು ನೇರವಾಗಿ ಹೋಮ್ ಕ್ವಾರಂಟೈನ್‍ಗೆ ಕಳುಹಿಸಿ, ಕಟ್ಟುನಿಟ್ಟಿನ ನಿಗಾ ವಹಿಸಲಾಗುವುದು. ಹೊಸ ಮಾರ್ಗಸೂಚಿ ಪ್ರಕಾರ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಸಹ ಹೋಮ್ ಕ್ವಾರಂಟೈನ್‍ಗೆ ಒಳಪಡಿಸಬೇಕಿಗಿದೆ. ಕ್ವಾರಂಟೈನ್ ವಿಧಿಸುವ ಮೊದಲು ಕಡ್ಡಾಯವಾಗಿ ಕ್ವಾರಂಟೈನ್ ವಾಚ್ ಆ್ಯಪ್ ಡೌನ್‍ಲೋಡ್ ಮಾಡಲು ತಿಳಿಸಬೇಕು ಎಂದರು.

Corona Lab a

ಸಭೆಯಲ್ಲಿ ಜಿ.ಪಂ.ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಶಿಮ್ಸ್ ನಿರ್ದೇಶಕ ಡಾ.ಗುರುಪಾದಪ್ಪ, ಡಿಎಚ್‍ಒ ಡಾ.ರಾಜೇಶ್ ಸುರಗಿಹಳ್ಳಿ, ಡಾ.ಶಂಕ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *