– ರಾಜ್ಯ ಸರ್ಕಾರಗಳಿಗೆ ವರದಿ ಸಲ್ಲಿಸಲು ಸೂಚನೆ
– ಪೋಷಕರು, ಶಿಕ್ಷಣ ಸಂಸ್ಥೆಗಳೊಂದಿಗೆ ಸಮಾಲೋಚಿಸಿ ವರದಿ ತಯಾರಿ
ನವದೆಹಲಿ: ಕೇಂದ್ರ ಸರ್ಕಾರ ಲಾಕ್‍ಡೌನ್ 5.0 ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜುಲೈ ನಂತರ ಶಾಲಾ ಕಾಲೇಜುಗಳನ್ನು ತೆರೆಯುವ ಬಗ್ಗೆ ಪ್ರಸ್ತಾಪಿಸಿದೆ.
ಕೊರೊನಾ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಶಾಲಾ ಕಾಲೇಜುಗಳನ್ನು ತೆರೆಯುವುದು ಸವಾಲಿನ ಸಂಗತಿಯಾಗಿದ್ದು, ಈ ಕುರಿತು ಜುಲೈ ಬಳಿಕ ನಿರ್ಧಾರ ಕೈಗೊಳ್ಳಳಾಗುವುದು ಎಂದು ತಿಳಿಸಿದೆ. ಶಾಲೆ, ಕಾಲೇಜು, ಶಿಕ್ಷಣ, ತರಬೇತಿ, ಕೋಚಿಂಗ್ ಸೆಂಟರ್ ಗಳನ್ನು ತೆರೆಯುವ ಕುರಿತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಜೊತೆಗೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.
Advertisement
Advertisement
ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸಹ ಶಿಕ್ಷಣ ಸಂಸ್ಥೆಗಳು ಹಾಗೂ ಪೋಷಕರೊಂದಿಗೆ ಚರ್ಚೆ ನಡೆಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಶಿಕ್ಷಣ ಸಂಸ್ಥೆಗಳು ಹಾಗೂ ಪೋಷಕರು ನೀಡುವ ಪ್ರತಿಕ್ರಿಯೆ, ಸಲಹೆಯನ್ನು ಪಡೆಯಬೇಕು. ಇದರ ಆಧಾರದ ಮೇಲೆ ಶಾಲೆಗಳನ್ನು ತೆರೆಯುವುದರ ಬಗ್ಗೆ ಜುಲೈನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.
Advertisement
Advertisement
ರಾಜ್ಯಗಳು ಸಲ್ಲಿಸುವ ವರದಿ ಆಧಾರದ ಮೇಲೆ ಕೇಂದ್ರ ಸಚಿವರು, ಸಂಬಂಧಪಟ್ಟ ಇಲಾಖೆಗಳು ಹಾಗೂ ಸ್ಟೇಕ್‍ಹೋಲ್ಡರ್ಸ್ ಗಳೊಂದಿಗೆ ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಕೊರೊನಾ ವೈರಸ್ ಹರಡುವ ಕುರಿತು ಚರ್ಚಿಸಲಾಗುವುದು. ನಂತರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಟಾಂಡರ್ಡ್ ಆಪರೇಟಿಂಗ್ ಪ್ರೊಸಿಜರ್(ಎಸ್‍ಒಪಿ) ಸಿದ್ಧಪಡಿಸಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.