ಬೆಂಗಳೂರು: ರಾಜ್ಯ ಸರ್ಕಾರದಿಂದ ಇನ್ನುಮುಂದೆ ಯಾವುದೇ ಸಮುದಾಯಕ್ಕೆ ಕೊರೊನಾ ಪರಿಹಾರ ಘೋಷಣೆ ಮಾಡಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಸಮುದಾಯಗಳಿಗೆ ಪರಿಹಾರ ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ಹಣ ತಲುಪಿಸಲು ಎಲ್ಲಾ ಕ್ರಮ ಕೈಗೊಳ್ಳುತ್ತಿದ್ದೇವೆ. ಈಗಾಗಲೇ ನನ್ನ ಶಕ್ತಿ ಮೀರಿ ಪ್ಯಾಕೇಜ್ ಘೋಷಣೆ ಮಾಡಿದ್ದೇನೆ. ಹೀಗಾಗಿ ಇನ್ನುಮುಂದೆ ಯಾವುದೇ ಸಮುದಾಯಕ್ಕೆ ಪರಿಹಾರ ಘೋಷಣೆ ಮಾಡುವುದಿಲ್ಲ ಎಂದು ತಿಳಿಸಿದರು.
Advertisement
Advertisement
ದೇವಸ್ಥಾನಗಳನ್ನು ತೆರೆಯಲು ಅನುಮತಿ ಕೊಟ್ಟಿದ್ದೇವೆ. ಇದರೊಂದಿಗೆ ಮಸೀದಿ, ಚರ್ಚ್ ಗಳಿಗೂ ಅವಕಾಶ ಕೊಡಲಾಗುತ್ತದೆ. ಈ ಸಂಬಂಧ ಕೇಂದ್ರ ಸರ್ಕಾರದಿಂದ ಅನುಮತಿ ಸಿಗಬೇಕು. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಕೆಲವು ನಿಬಂಧನೆಗಳನ್ನು ಅಳವಡಿಸಲು ಸಲಹೆ ಕೊಟ್ಟಿದ್ದಾರೆ. ಅದನ್ನು ಅನುಸರಿಸಲಾಗುತ್ತದೆ ಎಂದು ಹೇಳಿದರು.
Advertisement
ನಾವು ಕೋವಿಡ್-19 ಜತೆ ಬದುಕಬೇಕಾಗಿದೆ. ಸಾಕಷ್ಟು ಸಮಸ್ಯೆಗಳಿವೆ, ಹೊರಗಿನ ರಾಜ್ಯಗಳಿಂದ ಜನ ಬರುತ್ತಿದ್ದಾರೆ. ಅವರೆಲ್ಲರಿಗೂ ಉಳಿಯಲು ವ್ಯವಸ್ಥೆ ಮಾಡಬೇಕಿದೆ. ಅವರ ವಸತಿಗೆ ಸಮಸ್ಯೆಯಾಗಿದೆ. ಇದರ ಬಗ್ಗೆಯೂ ಕೇಂದ್ರಕ್ಕೆ ಬರೆದ ಪತ್ರದಲ್ಲಿ ಗಮನ ಸೆಳೆಯಲಾಗಿದೆ ಎಂದರು.
Advertisement
ಇದಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂ ಅವರ 56ನೇ ಪುಣ್ಯತಿಥಿ ಹಿನ್ನೆಲೆ ವಿಧಾನಸೌಧದಲ್ಲಿ ಇರುವ ನೆಹರೂ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಸ್ವತಂತ್ರ ಭಾರತದ ಮೊದಲ ಪ್ರಧಾನಿ, ಮಕ್ಕಳ ನೆಚ್ಚಿನ ಚಾಚಾ, ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ.@BSYBJP pic.twitter.com/vBjMpyYr2T
— CM of Karnataka (@CMofKarnataka) May 27, 2020