ಜೈಪುರ: ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಗುರುವಾರ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಏಪ್ರಿಲ್ 16ರಿಂದ, 19ರವರೆಗೂ ಸಂಜೆ 6ರಿಂದ ಬೆಳಗ್ಗೆ 5ರವರೆಗೂ ವಾರಾಂತ್ಯದಲ್ಲಿ ನೈಟ್ ಕರ್ಫ್ಯೂ ಘೋಷಿಸಿದ್ದಾರೆ.
Advertisement
ಈ ಕುರಿತಂತೆ ಸಿಎಂ ಅಶೋಕ್ ಗೆಹ್ಲೋಟ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ಕೋವಿಡ್-19 ಹೊಸ ನಿರ್ಬಂಧನೆಗಳನ್ನು ಪಾಲಿಸುವಂತೆ ಹಾಗೂ ಅವುಗಳನ್ನು ಅನುಸರಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.
Advertisement
कोरोना के बढ़ते संक्रमण को देखते हुए कल शुक्रवार शाम 6 बजे से सोमवार सुबह 5 बजे तक प्रदेश में कर्फ्यू रहेगा। आप सभी से अपील है कि कर्फ्यू के दौरान सरकार का सहयोग करें और कोविड एप्रोप्रिएट बिहेवियर का पालन करें। #Rajasthan
— Ashok Gehlot (@ashokgehlot51) April 15, 2021
Advertisement
ರಾಜಸ್ಥಾನದಲ್ಲಿ ಕೊರೊನಾಗೆ ನಿನ್ನೆ 33 ಮಂದಿ ಸಾವನ್ನಪ್ಪಿದ್ದು, 6,658 ಹೊಸ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆ, ನೈಟ್ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ. ಅಲ್ಲದೆ ನೈಟ್ ಕರ್ಫ್ಯೂ ವೇಳೆ ಬ್ಯಾಂಕಿಂಗ್, ಎಲ್‍ಪಿಜಿ ಸೇವೆಗಳು, ಹಣ್ಣು, ತರಕಾರಿ ಮತ್ತು ಹಾಲು ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗುತ್ತದೆ.
Advertisement
ಈ ಸಮಯದಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳದಿದ್ದರೆ, ಸೋಂಕಿನ ಪ್ರಮಾಣ ಹೆಚ್ಚಾಗಲಿದ್ದು, ಇತರ ರಾಜ್ಯಗಳಂತೆ ಇಲ್ಲಿನ ಪರಿಸ್ಥಿತಿ ಕೂಡ ಹದಗೆಡಬಹುದು ಎಂದು ಸಿಎಂ ಅಶೋಕ್ ಗೆಹ್ಲೋಟ್ ಎಚ್ಚರಿಸಿದ್ದಾರೆ.