ಬೆಂಗಳೂರು: ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗೂ ಉಗುಳುವುದು ಕಾನೂನು ರೀತಿ ಅಪರಾಧವಾಗಿದೆ. ಒಂದು ವೇಳೆ ಉಗುಳಿದ್ದು ಕಂಡು ಬಂದರೆ ಅಂತವರಿಗೆ ದಂಡದ ಜೊತೆ ಐಪಿಸಿ ಸೆಕ್ಷನ್ ಅಡಿ ಕೇಸ್ ದಾಖಲು ಮಾಡಿಕೊಳ್ಳಲಾಗುತ್ತದೆ ಎಂದು ಸರ್ಕಾರ ಆದೇಶಿಸಿದೆ.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಶ್ರೀರಾಮುಲು, ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಇಂದಿನಿಂದಲೇ ನಿಷೇಧವಾಗಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಐಪಿಸಿ ಸೆಕ್ಷನ್ 188, 268, 269, 270 ರ ಅಡಿ ಕೇಸ್ ದಾಖಲು ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
Advertisement
Advertisement
ಪ್ರತೀ ವರ್ಷ ಮೇ 31 ವಿಶ್ವ ತಂಬಾಕು ರಹಿತ ದಿನಾಚರಣೆಯಾಗಿರುತ್ತದೆ. ಈ ದಿನವಾದ ಇಂದು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿಯುವುದು, ಉಗುಳುವುದನು ನಿಷೇಧಗೊಳಿಸಿ ಆದೇಶ ಮಾಡಲಾಗಿದೆ ಎಂದು ಸಚಿವರು ಘೋಷಣೆ ಮಾಡಿದ್ದಾರೆ.
Advertisement