– ಏನೇನು ಸೇವಿಸುತ್ತಾರೆ?
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದು, ಇದೀಗ ಇಮ್ಯುನಿಟಿ ಪವರ್ ಹೆಚ್ಚಿಸುವ ಆಹಾರದ ಮೊರೆ ಹೋಗಿದ್ದಾರೆ.
ಸೋಂಕು ಬರದಿರಲು ಸಿಎಂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಸೇವನೆ ಮಾಡುತ್ತಿದ್ದಾರೆ. ವೈದ್ಯರ ಸಲಹೆಯಂತೆ ಇಮ್ಯುನಿಟಿ ಹೆಚ್ಚಿಸಿಕೊಳ್ಳುವತ್ತ ತಮ್ಮ ಗಮನಹರಿಸಿದ್ದಾರೆ.
ತಮ್ಮ ಆಹಾರ ಪದ್ಧತಿಯಲ್ಲಿ ಪೌಷ್ಟಿಕ ಆಹಾರಕ್ಕೆ ಹೆಚ್ಚಿನ ಮಹತ್ವ ನೀಡಿದ್ದಾರೆ. ಹೀಗಾಗಿ ವಿಟಮನ್ ಎ ಮತ್ತು ಸಿ ಇರುವ ಆಹಾರ ಪದಾರ್ಥಗಳು, ಕಷಾಯ, ಬಿಸಿ ಬಿಸಿ ಕಾಫಿ, ಡ್ರೈ ಫ್ರೂಟ್ಸ್, ತಾಜಾ ತರಕಾರಿ ಸೇರಿದಂತೆ ಹಲವು ಮಹತ್ವದ ಪೌಷ್ಟಿಕ ಆಹಾರಗಳನ್ನು ಸೇವಿಸುತ್ತಿದ್ದಾರೆ. ತಮ್ಮ ನಿವಾಸ ಕಾವೇರಿಯಲ್ಲಿ ಪ್ರೀತಿಯಿಂದ ಸಾಕಿರುವ ಹಸುವಿನ ಹಾಲನ್ನೇ ಕಾಫಿಗೆ ಬಳಸುತ್ತಿದ್ದಾರೆ. ಜೊತೆಗೆ ಮನೆಯಲ್ಲಿದ್ದರೂ ಸದಾ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಪಾಲನೆಯನ್ನು ಕೂಡ ಸಿಎಂ ಅವರು ಚಾಚು ತಪ್ಪದೆ ಮಾಡುತ್ತಿದ್ದಾರೆ. ಇದನ್ನೂ ಓದಿ: ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆರೋಗ್ಯಕರ ಕಷಾಯಗಳು
ನಾಳೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸುತ್ತಿದ್ದು, ಈ ಮೂಲಕ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಇದನ್ನೂ ಓದಿ: ತೆಂಗಿನಕಾಯಿ, ತೆಂಗಿನ ಎಣ್ಣೆಯಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ?
ಸಿಎಂ ಗೃಹ ಕಚೇರಿ ಕೃಷ್ಣ ಮತ್ತು ಸರ್ಕಾರಿ ನಿವಾಸ ಕಾವೇರಿಯಲ್ಲಿ ಪಾಸಿಟಿವ್ ಪ್ರಕರಣಗಳು ಹಿನ್ನೆಲೆಯಲ್ಲಿ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ಆರೋಗ್ಯಾಧಿಕಾರಿಗಳ ಸಮ್ಮುಖದಲ್ಲಿ ಇಂದೂ ಕೂಡ ಸ್ಯಾನಿಟೈಸ್ ಮಾಡಲಾಯಿತು. ಇದನ್ನೂ ಓದಿ: ಕೊರೊನಾ ವಾರಿಯರ್ಸ್‍ಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಚ್ಯವನ್ ಪ್ರಾಶ್ ವಿತರಣೆ