– ಗ್ರಾ.ಪಂ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಸಂತಸ
ಬೆಂಗಳೂರು: ಆರೋಗ್ಯದ ದೃಷ್ಟಿಯಿಂದ ಇವತ್ತು ಒಂದು ದಿನ ನಿಷೇಧಾಜ್ಞೆಯನ್ನು ಪಾಲನೆ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬ್ರಿಟನ್ ವೈರಸ್ ರೂಪಾಂತರ ಆತಂಕದ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಗ್ಗೆ 6ಗಂಟೆ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಜನರ ಆರೋಗ್ಯದ ದೃಷ್ಟಿಯಿಂದ ಇವತ್ತು ಒಂದು ದಿನ ಪಾಲನೆ ಮಾಡಿ, ಜನರಲ್ಲಿ ವಿನಂತಿ ಮಾಡುತ್ತೇನೆ ಎಂದ ಅವರು ಹೊಸ ವರ್ಷದ ಶುಭಾಶಯಗಳು ಎಲ್ಲರಿಗೂ, ಸುಖ, ಶಾಂತಿ, ನೆಮ್ಮದಿ ತರಲಿ ಎಂದು ಶುಭ ಹಾರೈಸಿದರು.
Advertisement
ಗ್ರಾ.ಪಂ ಚುನಾವಣೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು, ವಿಜೇತರಿಗೆ ಅಭಿನಂದನೆಗಳು. ಸವಾಲಿನ ಪರಿಸ್ಥಿತಿಗಳಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನ ಬೆಂಬಲಿಸಿದ್ದಾರೆ, ವಿಪಕ್ಷಗಳ ಆರೋಪಗಳಿಗೆ ಸೂಕ್ತ ಉತ್ತರ ನೀಡಿದ್ದಾರೆ.
— B.S.Yediyurappa (@BSYBJP) December 31, 2020
Advertisement
ಇದೇ ವೇಳೆ ಪಂಚಾಯತ್ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ದಿನೇ ದಿನೇ ತನ್ನ ಸಾಧನೆ ಉತ್ತಮಗೊಳಿಸ್ತಿದೆ. ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಶೇ.60 ಕ್ಕೂ ಹೆಚ್ಚು ಸ್ಥಾನಗಳನ್ನ ಗಳಿಸಿದ್ದಾರೆ. ಇದು ಸಾಮೂಹಿಕ ನಾಯಕತ್ವದ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಶ್ರಮ ಇದೆ. 3,800 ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಗೆದ್ದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
Advertisement
Advertisement
ಮುಖ್ಯಮಂತ್ರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ್, ಸಚಿವರಾದ ಬಸವರಾಜ ಬೊಮ್ಮಾಯಿ, ಅಶೋಕ್ ಹಾಗೂ ಸುರೇಶ್ ಕುಮಾರ್ ಸಾಥ್ ನೀಡಿದರು.