ವಿಜಯಪುರ: ಈಜಲು ಹೋಗಿದ್ದ ನಾಲ್ಕು ಮಕ್ಕಳು ಭೀಮಾ ನದಿಯಲ್ಲಿ ಕೊಚ್ಚಿಹೋದ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ದಕ್ಷಿಣ ಸೋಲಾಪುರ ತಾಲೂಕಿನ ಲವಗಿ ಗ್ರಾಮದ ಬಳಿ ನಡೆದಿದೆ.
ನಿನ್ನೆ ಸಂಜೆ ಘಟನೆ ನಡೆದಿದ್ದು, ನದಿಯಲ್ಲಿ ಕೊಚ್ಚಿ ಹೋದ ಮಕ್ಕಳ ಪತ್ತೆಗೆ ಶೋಧ ಕಾರ್ಯ ನಡೆದಿದೆ. ಲವಗಿ ಗ್ರಾಮದ ಶಿವಾನಂದ ಪಾರ್ಶೆಟ್ಟಿ ಅವರ ಮಕ್ಕಳಾದ ಆರತಿ(13), ವಿಠ್ಠಲ(10) ಹಾಗೂ ಶಿವಾಜಿ ತಾನವಡೆ ಅವರ ಮಕ್ಕಳಾದ ಸಮೀಕ್ಷಾ(14), ಅರ್ಪಿತಾ(13) ನೀರುಪಾಲಾದ ಮಕ್ಕಳು. ಇದನ್ನೂ ಓದಿ: ಮಳೆ ಬರದಿದ್ರೂ ಭಟ್ಕಳದಲ್ಲಿ ಮುಳಗಡೆಯಾಯ್ತು ಇಡೀ ಗ್ರಾಮ
ಸದ್ಯ ಆರತಿ ಮೃತದೇಹ ಮಾತ್ರ ಪತ್ತೆಯಾಗಿದ್ದು, ಉಳಿದ ಮೂವರಿಗಾಗಿ ಹುಡುಕಾಟ ಮುಂದುವರೆದಿದೆ. ಕುಟುಂಬಸ್ಥರು ಮನೆ ಕೆಲಸದಲ್ಲಿ ತೊಡಗಿದ್ದಾಗ ಮಕ್ಕಳು ನದಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರದ ಮಂದ್ರೂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.