ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನಕ್ಕೆ ಶಿವಮೊಗ್ಗದವರೇ ಆಗಿರುವ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ, ನೂತನ ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಪ್ರಶ್ನೆ ಇದೀಗ ಗರಿಗೆದರಿದೆ. ಜಿಲ್ಲೆಯ ಮತ್ತೊಬ್ಬ ಬಿಜೆಪಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು, ತವರು ಜಿಲ್ಲೆಯಲ್ಲಿ ಒತ್ತಡ ಕೇಳಿ ಬರುತ್ತಿದೆ.
Advertisement
ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿರುವ ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆ ಸದಸ್ಯರು, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನರಿಗೆ ಸಿಎಂ ಸ್ಥಾನ ನೀಡುವಂತೆ ಬಿಜೆಪಿ ಹೈಕಮಾಂಡ್‍ಗೆ ಒತ್ತಾಯಿಸಿದ್ದಾರೆ. ಕುರುಬರ ವೇದಿಕೆಯ ಅಧ್ಯಕ್ಷ ರಾಮಕೃಷ್ಣ ಮೂಡ್ಲಿ ಈ ಸಂಬಂಧ ಬಿಜೆಪಿ ನಾಯಕರಿಗೆ ಒತ್ತಾಯಿಸಿದ್ದು, ಹಿಂದುಳಿದ ವರ್ಗಗಳ ನಾಯಕರಾದ ಈಶ್ವರಪ್ಪರಿಗೆ ಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ರಾಜೀನಾಮೆ – ಶಿಕಾರಿಪುರ ಸ್ವಯಂ ಪ್ರೇರಿತ ಬಂದ್
Advertisement
Advertisement
ಮೂರು ದಶಕಗಳ ಕಾಲ ಪಕ್ಷವನ್ನು ಸಂಘಟಿಸಿ, ಪಕ್ಷಕ್ಕಾಗಿ ದುಡಿದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ, ಶಾಸಕ, ಸಚಿವರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಬಿಜೆಪಿ ಈಗಾಗಲೇ ಲಿಂಗಾಯಿತ, ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಿದೆ. ಅದರಂತೆ ಈ ಬಾರಿ ಹಿಂದುಳಿದ ವರ್ಗಗಳ ನಾಯಕರಿಗೂ ಸಿಎಂ ಸ್ಥಾನ ನೀಡಬೇಕು. 2008 ರಲ್ಲಿ ಬಿಜೆಪಿ ಪಕ್ಷವನ್ನು, ಅಧಿಕಾರಕ್ಕೆ ತರುವಲ್ಲಿ ಬಿ.ಎಸ್. ಯಡಿಯೂರಪ್ಪ ಅವರಷ್ಟೇ, ಕೆ.ಎಸ್. ಈಶ್ವರಪ್ಪ ಅವರು ಕೂಡ ಶ್ರಮ ಹಾಕಿದ್ದಾರೆ. ಇಂದಿಗೂ ಕೂಡ ಪಕ್ಷವನ್ನು ತನ್ನ ತಾಯಿಯ ಸ್ಥಾನದಲ್ಲಿಟ್ಟು, ಗೌರಿವಿಸುತ್ತಿದ್ದಾರೆ. ಪಕ್ಷದ ಸಿದ್ಧಾಂತಗಳನ್ನು ಪಾಲನೆ ಮಾಡುತ್ತಿದ್ದಾರೆ. ಅದರಲ್ಲೂ ಕುರುಬರ ಸಮುದಾಯಕ್ಕೆ ರಾಜ್ಯ ನಾಯಕರಾಗಿದ್ದು ನಮ್ಮ ನಾಯಕರು ಕೂಡ ಮುಖ್ಯಮಂತ್ರಿ ಆಗಲೇಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ರಾಜೀನಾಮೆ – ಯೋಗೇಶ್ವರ್, ಯತ್ನಾಳ್ ಭಾವಚಿತ್ರ ದಹಿಸಿ ಆಕ್ರೋಶ