ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹತ್ತಿರದ ಸಂಬಂಧಿಯೊಬ್ಬರಿಗೆ ಸೋಮವಾರ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಇವರು ಸಚಿವರ ಮನೆಯಲ್ಲೇ ಹೆಚ್ಚು ಇರುತ್ತಿದ್ದರಿಂದ ಕುಟುಂಬಸ್ಥರಿಗೆ ಆತಂಕ ಎದುರಾಗಿದ್ದರಿಂದ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದಾರೆ. ಅದೃಷ್ಟವಶಾತ್ ಎಲ್ಲರ ವರದಿ ನೆಗೆಟಿವ್ ಬಂದಿದೆ.
Advertisement
ಸಚಿವರ ಹತ್ತಿರದ ಸಂಬಂಧಿ ಆಗಿದ್ದರಿಂದ ಸೋಂಕಿತ ವ್ಯಕ್ತಿ ಹೆಚ್ಚಾಗಿ ಸಚಿವರ ಮನೆಯಲ್ಲಿಯೇ ಇರುತ್ತಿದ್ದರು. ತಮ್ಮ ಹತ್ತಿರದ ಸಂಬಂಧಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಸಚಿವ ಈಶ್ವರಪ್ಪ ಕುಟುಂಬಸ್ಥರಿಗೆ ಶಾಕ್ ಆಗಿತ್ತು. ಹೀಗಾಗಿ ಸಚಿವ ಈಶ್ವರಪ್ಪ, ಸಚಿವರ ಪತ್ನಿ, ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಸಚಿವರ ಆಪ್ತ ಸಹಾಯಕರು ಹಾಗೂ ಮನೆ ಕೆಲಸದವರು ಸೇರಿ ಒಟ್ಟು 21 ಮಂದಿ ಕೊರೊನಾ ತಪಾಸಣೆಗೆ ಒಳಗಾಗಿದ್ದರು.
Advertisement
ಇವರೆಲ್ಲರ ವರದಿ ನೆಗೆಟಿವ್ ಬಂದಿದ್ದು, ಸಚಿವರ ಕುಟುಂಬ ಇದೀಗ ನಿಟ್ಟುಸಿರು ಬಿಟ್ಟಿದೆ. ಕೊರೊನಾ ವರದಿಯಲ್ಲಿ ನನ್ನದೂ ಸೇರಿದಂತೆ ನಮ್ಮ ಕುಟುಂಬಸ್ಥರು ಹಾಗೂ ಕೆಲಸದವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಹೀಗಾಗಿ ಯಾವುದೇ ಆತಂಕ ಇಲ್ಲ. ಜೊತೆಗೆ ಕ್ವಾರಂಟೈನ್‍ಗೆ ಒಳಗಾಗುವ ಅವಶ್ಯಕತೆ ಸಹ ಇಲ್ಲ. ನಾಳೆಯಿಂದಲೇ ಮತ್ತೆ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
Advertisement
Advertisement
ಸೋಂಕಿತ ವ್ಯಕ್ತಿಯನ್ನು ಕೂಡಲೇ ಕೋವಿಡ್-19 ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.