ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿಯೂ ಸರಳವಾಗಿ ಆಚರಿಸಲು ಚಿಂತಿಸಲಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
Advertisement
ಹೆಚ್.ಟಿ.ಕೋಟೆ ತಾಲ್ಲೂಕು ಬಾವಲಿ ಚೆಕ್‌ಪೋಸ್ಟ್ ಪರಿಶೀಲನೆ ವೇಳೆ ದಸರಾ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸರಳ ದಸರಾ ಆಚರಣೆಗೆ ರೂಪರೇಷೆಗಳನ್ನು ಸಿದ್ದಪಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ರೂಪರೇಷೆ ಸಿದ್ಧವಾದ ನಂತರ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ಸಿನಿಂದ ಬಂದವರನ್ನ ಮಂತ್ರಿ ಮಾಡಬೇಕಾಗಿದ್ದರಿಂದ ನನಗೆ ಸಚಿವ ಸ್ಥಾನ ಕೈ ತಪ್ಪಿತು: ರೂಪಾಲಿ ನಾಯ್ಕ
Advertisement
Advertisement
ಕಳೆದ ವರ್ಷ ದಸರಾ ಆಚರಣೆಗೆ 10 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಆ ಪೈಕಿ 7.50 ಕೋಟಿ ಅನುದಾನ ಉಳಿದಿದೆ. ಈ ವರ್ಷದ ದಸರಾ ಆಚರಣೆಗೆ ಸರ್ಕಾರದ ಅನುಮೋದನೆ ಪಡೆದು ಆ ಉಳಿಕೆ ಅನುದಾನ ಬಳಸಿಕೊಳ್ಳಲಾಗುವುದು. ಮೈಸೂರು ದಸರಾ ಮಹೋತ್ಸವವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ವರ್ಷವೂ ದಸರಾ ಆಚರಣೆ ಮಾಡಲಾಗುತ್ತದೆ ಎಂದರು.
Advertisement