ಹುಬ್ಬಳ್ಳಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೊರೊನಾ ಸಮಯದಲ್ಲೂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಇದನ್ನೂ ಓದಿ: ಶುರುವಾಯ್ತೊಂದು ಹೊಸ ಹಾದಿ – ಪಪ್ಪಿ ತೋರಿಸಿದ ರಕ್ಷಿತ್ ಶೆಟ್ಟಿ
ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಪದೆ ಪದೆ ಚೆರ್ಚೆಗೆ ಬರುತ್ತಿದೆ. ಸಿಎಂ ರಾಜೀನಾಮೆ ಪಡೆಯುವ ಪ್ರಶ್ನೆ ಪಕ್ಷದ ಮುಂದಿಲ್ಲ. ಕೊರೊನಾ ಸಂಕಷ್ಟ ಕಾಲದಲ್ಲಿ ಈ ವಯಸ್ಸಿನಲ್ಲೂ ಬಿಎಸ್ವೈ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ರಾಜೀನಾಮೆಗೆ ಸಿದ್ಧ, ಅವಮಾನ ಮಾಡಿ ಕೆಳಗೆ ಇಳಿಸುತ್ತೇವೆ ಎಂದರೆ ನಾನು ಬಗ್ಗಲ್ಲ
ಮುಖ್ಯಮಂತ್ರಿ ಸಮರ್ಥರಿದ್ದಾರೆ, ಕ್ರಿಯಾಶೀಲತೆಯಿಂದ ಕೆಲಸ ಮಾಡುತ್ತಿದ್ದಾರೆ. ಸದ್ಯ ಅವರನ್ನ ಬದಲಾವಣೆ ಮಾಡುವ ಯಾವುದೇ ವಿಚಾರವಿಲ್ಲ. ಹೈಕಮಾಂಡ್ ಏನು ಹೇಳುತ್ತಾರೆ ಅದನ್ನು ಕೇಳುತ್ತೇನೆ ಅಂದಿದ್ದಾರೋ ಹೊತಾಗಿ ನಾನು ರಾಜೀನಾಮೇ ಕೊಡುತ್ತೇನೆ ಎಂದು ಹೇಳಿಲ್ಲ ಎಂದು ಸಿಎಂ ಬದಲಾವಣೆ ವಿಚಾರಕ್ಕೆ ತೆರೆ ಎಳೆದಿದ್ದಾರೆ.



