ಕಲಬುರಗಿ: ಬಾಂಗ್ಲಾ ಗಡಿಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ ಯೋಧ ರಾಜಕುಮಾರ.ಎಂ.ಮಾವಿನ ಅವರು ಇಂದು ಹುತ್ಮಾತರಾಗಿದ್ದಾರೆ.
ತ್ರಿಪುರಾ ರಾಜ್ಯದ ಭಾರತ ಮತ್ತು ಬಾಂಗ್ಲಾ ಗಡಿಯಲ್ಲಿರುವ ಧಲಾಯಿ ಪ್ರದೇಶದಲ್ಲಿ ಗಸ್ತು ನಡೆಸುತ್ತಿದ್ದ ಸಮಯದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿ ವೇಳೆ ಎದೆಗೆ ಗುಂಡು ತಾಕಿ ಸ್ಥಳದಲ್ಲಿಯೇ ಹುತಾತ್ಮರಾದರು ಎನ್ನಲಾಗಿದೆ.
ವೀರ ಯೋಧನ ಸಾವಿನ ಸುದ್ದಿ ತಿಳಿದು ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಯೋಧನ ಪಾರ್ಥಿವ ಶರೀರ ಗುರುವಾರ ಗ್ರಾಮಕ್ಕೆ ಆಗಮಿಸುವ ಸಾಧ್ಯತೆಯಿದೆ. ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.