ಕಾರವಾರ: ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಉಗ್ರ ಸಂಘಟನೆಯ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಯುವಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
28 ವರ್ಷದ ಸೈಯದ್ ಇದ್ರಿಸ್ ನಬಿ ಸಾಬ್ ಬಂಧಿತ ಆರೋಪಿಯಾಗಿದ್ದಾನೆ. ಲಷ್ಕರ್-ಎ-ತೊಯ್ಬಾದ ಸಂಘಟನೆಯಲ್ಲಿ ಗುರುತಿಸಿಕೊಂಡು ಪಶ್ಚಿಮಬಂಗಾಳದಲ್ಲಿ ಬಂಧಿಯಾಗಿದ್ದ ತಾನಿಯಾ ಪರ್ವೀನ್ ಎನ್ನುವವನೊಂದಿಗೆ ಈತ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಈತನನ್ನು ಬಂಧಿಸಲಾಗಿದೆ.
NIA Arrests LeT Accused from Karnataka in West Bengal LeT Recruitment Case pic.twitter.com/bZFnPJS3fw
— NIA India (@NIA_India) November 11, 2020
ಮೊಬೈಲ್ ಫೋನ್ ಆಧಾರದ ಮೇಲೆ ಈತನನ್ನ ಬಂಧಿಸಲಾಗಿದೆ. ಎನ್‍ಐಎ ಪ್ರಾಥಮಿಕ ತನಿಖೆಯ ಪ್ರಕಾರ ಈತ ಐಎಸ್‍ಐ ಉಗ್ರ ಸಂಘಟನೆಯೊಂದಿಗೂ ಸಂಪರ್ಕ ಹೊಂದಿದ್ದ ಎನ್ನಲಾಗಿದ್ದು, ಬಂಧಿಸಿ ಕೋಲ್ಕತ್ತಾಗೆ ಕರೆದೊಯ್ದಿದ್ದಾರೆ.
ಬಂಧನ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಎನ್‍ಐಎ, ಬಂಧಿತ ಪಾಕಿಸ್ತಾನ ಮೂಲದ ಹ್ಯಾಂಡ್ಲರ್ ಗಳು ನಿರ್ವಹಿಸುತ್ತಿದ್ದ ವಿವಿಧ ಸಾಮಾಜಿಕ ಜಾಲತಾಣಗಳ ಗುಂಪುಗಳ ಭಾಗವಾಗಿದ್ದು, ಇವುಗಳನ್ನು ಭಯೋತ್ಪಾದಕ ಚಟುವಟಿಕೆ ಮತ್ತು ಎಲ್‍ಇಟಿ ಉಗ್ರ ಸಂಘಟನೆಯ ಸ್ಪೀಪರ್ ಸೆಲ್ ಆಗಿ ನೇಮಕ ಮಾಡಿಕೊಳ್ಳಲು ಬಳಕೆ ಮಾಡಿಕೊಳ್ಳಲಾಗಿತ್ತು. ಆರೋಪಿಯನ್ನು ಕೋಲ್ಕತ್ತಾ ಎನ್‍ಐಎ ಕೋರ್ಟಿನಲ್ಲಿ ಹಾಜರುಪಡಿಸಲು ಕರೆದ್ಯೊಲಾಗುತ್ತಿದೆ ಎಂದು ತಿಳಿಸಿದೆ.