– ದ.ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಭಾರೀ ಮಳೆ
ಉಡುಪಿ: ಜಿಲ್ಲೆಯಲ್ಲಿ ಆರು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾನೆಯಿಂದಲೇ ಉಡುಪಿ ಜಿಲ್ಲೆಯ ಅಲ್ಲಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಸುಮಾರು 80 ಮಿಲಿ ಮೀಟರ್ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜಿಲ್ಲೆಯ ಕಾಪು ಉಡುಪಿ ಕುಂದಾಪುರ ಮತ್ತು ಬೈಂದೂರ್ ತಾಲೂಕಿನಲ್ಲಿ ನಾಡದೋಣಿ ಮೀನುಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ 45 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಅಲೆಗಳ ಪ್ರಮಾಣ ಏರಿಕೆಯಾಗಲಿದೆ. ಸಮುದ್ರ ತೀರದಲ್ಲಿ ವಾಸಿಸುವ ಮೀನುಗಾರರು ಎಚ್ಚರಿಕೆಯಿಂದ ಇರಬೇಕು. ಕಡಲತೀರದಲ್ಲಿ 2 ಮೀಟರ್ ವರೆಗೂ ಅಲೆಗಳು ಹೇಳಬಹುದು ಮೀನುಗಾರರು ಎಚ್ಚರಿಕೆಯಿಂದ ಇರಿ ಎಂದು ಸೂಚಿಸಲಾಗಿದೆ.
Advertisement
Advertisement
ಮುಂದಿನ ನಾಲ್ಕೈದು ದಿನ ಗಾಳಿ ಜೊತೆ ಮಳೆಯಾಗುವ ಮುನ್ಸೂಚನೆ ಇದೆ. ನದಿ, ಸಮುದ್ರ ತೀರದ ಜನ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಹೇಳಿದೆ. ನದಿ ಮತ್ತು ಸಮುದ್ರ ತೀರಕ್ಕೆ ಬರುವ ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕು. ನೀರಿಗೆ ಇಳಿಯಬಾರದು ಎಂದು ಡಿಸಿ ಜಗದೀಶ್ ಸೂಚನೆ ನೀಡಿದ್ದಾರೆ.
Advertisement
Advertisement
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹವಾಮಾನ ಇಲಾಖೆ ಎಚ್ಚರಿಕೆಯಂತೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೆಲಸ ಕಾರ್ಯದ ನಿಮಿತ್ತ ಓಡಾಡುವ ಜನ ಎಚ್ಚರಿಕೆಯಿಂದ ಇರಬೇಕು. ನದೀತೀರದಲ್ಲಿ ಸಮುದ್ರ ತೀರದಲ್ಲಿ ನೀರಿನ ಮಟ್ಟ ಜಾಸ್ತಿಯಾದರೆ ತಕ್ಷಣ ಕಂಟ್ರೋಲ್ ರೂಮ್ ಅಲ್ಲ ಸಂಪರ್ಕ ಮಾಡಬೇಕು ಎತ್ತರ ಪ್ರದೇಶಗಳಿಗೆ ಹೋಗಬೇಕು ಎಂದು ಮಾಹಿತಿ ನೀಡಿದರು. ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಯಾರು ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆ ಮುಂದುವರಿದಿದ್ದು, ಗ್ರಾಮೀಣ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ,ಬೆಳ್ತಂಗಡಿ ತಾಲೂರು ಸೇರಿ ಹಲವೆಡೆ ಭಾರೀ ಮಳೆಯಾಗಿದೆ. ಮಂಗಳೂರು ನಗರ ಪ್ರದೇಶದಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದ್ದರೂ ಗ್ರಾಮೀಣ ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ.
ಪಶ್ಚಿಮಘಟ್ಟದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜೀವನದಿಗಳಿಗೆ ಮಳೆ ನೀರು ಹರಿದು ಬರುತ್ತಿರೋದ್ರಿಂದ ಜೀವನದಿಗಳು ತುಂಬಲಾರಂಭಿಸಿದೆ. ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.