ಉಡುಪಿ: ಹವಾಮಾನ ಇಲಾಖೆ ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಅರಬ್ಬಿ ಸಮುದ್ರ ಪ್ರಕ್ಷುಬ್ಧ ಆಗಿದ್ದು 4 ಮೀಟರ್ ವರೆಗೆ ಅಲೆಗಳು ಏಳಬಹುದು ಎಂಬ ಎಚ್ಚರಿಕೆಯ ಸಂದೇಶವನ್ನು ರವಾನೆ ಮಾಡಿದೆ. ಆದ್ರೂ ಆತಂಕದ ನಡುವೆಯೇ ನಾಡದೋಣಿ ಮೀನುಗಾರರು ಸಮುದ್ರಕ್ಕಿಳಿದಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ ಎರಡು ದಿನಗಳ ಕಾಲ ಕಡಿಮೆಯಾಗಿದ್ದ ಮಾನ್ಸೂನ್ ನಿರಂತರವಾಗಿ ಸುರಿಯುತ್ತಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ನಿರಂತರವಾಗಿ ಅಲ್ಲಲ್ಲಿ ಮಳೆ ಬೀಳುತ್ತಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಉಡುಪಿ ಜಿಲ್ಲೆಯ ಎಲ್ಲಾ ನದಿಗಳು ತುಂಬಿ ಹರಿಯುತ್ತಿದೆ. ಅರಬ್ಬಿ ಸಮುದ್ರದಲ್ಲಿ 60ರಿಂದ 70 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು ನದಿಯ ನೀರು ಸರಾಗವಾಗಿ ಸಮುದ್ರ ಸೇರಲು ಸಾಧ್ಯವಾಗುತ್ತಿಲ್ಲ.
ಯಾವುದೇ ಕಾರಣಕ್ಕೂ ನಾಡದೋಣಿ ಮೀನುಗಾರಿಕೆ ಬೋಟ್ ಗಳು ಸಮುದ್ರಕ್ಕೆ ಇಳಿಯಬಾರದು ಎಂದು ಖಡಕ್ ಸೂಚನೆ ನೀಡಲಾಗಿದೆ. ಇಷ್ಟಾದರೂ ಕೆಲ ಮೀನುಗಾರರು ಆತಂಕದ ವಾತಾವರಣದ ನಡುವೆ ಸಮುದ್ರಕ್ಕಿಳಿದು ಕಸುಬು ಮಾಡಿದ್ದಾರೆ. ಗಾಳಿ ಮಳೆಯ ನಡುವೆ ಮೀನುಗಾರಿಕಾ ವೃತ್ತಿ ಮಾಡುವ ಮೊಗವೀರರು ಆತಂಕವನ್ನು ತಂದುಕೊಳ್ಳಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಇದನ್ನೂ ಓದಿ: ಉಡುಪಿಯ ವಿಶಾಲಾ ಮರ್ಡರ್- ಯುಪಿಯಲ್ಲಿ ತಲೆಮರೆಸಿಕೊಂಡಿರುವ ಕಾಂಟ್ರ್ಯಾಕ್ಟ್ ಕಿಲ್ಲರ್
ಸಮುದ್ರದ ಪ್ರಕ್ಷುಬ್ಧತೆ ಜಾಸ್ತಿ ಇದ್ದು ಪ್ರವಾಸಿಗರು ಮಲ್ಪೆ ಮರವಂತೆ ಕಾಪು ಪಡುಬಿದ್ರೆಯಲ್ಲಿ ನೀರಿಗಿಳಿಯಬಾರದು ಸೂಚನೆಯನ್ನು ನೀಡಲಾ ಗಿದೆ. ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಮುಂದುವರಿದಿದ್ದು, ಮಳೆ ಮುಂದುವರಿಯುವ ಸಾಧ್ಯತೆಯಿದೆ. ಮಳೆಯ ನಡುವೆ ಬಿಸಿಲಿನ ಕಣ್ಣಾಮುಚ್ಚಾಲೆ ನಡೆಯುತ್ತಿದೆ. ಇದನ್ನೂ ಓದಿ: ಕ್ಯಾಸಲ್‍ರಾಕ್ ಬಳಿ ರೈಲಿನ ಮೇಲೆ ಕುಸಿದ ಗುಡ್ಡ