– ನದಿಭಾಗದಲ್ಲಿ ಕಟ್ಟೆಚ್ಚರ ಘೋಷಣೆ
– ನದಿಯಂತೆ ಹರಿದ ಹಿಮ
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ತಪೋವನ್ ಪ್ರದೇಶದ ರೈನಿ ಗ್ರಾಮದಲ್ಲಿನ ವಿದ್ಯುತ್ ಯೋಜನೆಯ ಬಳಿ ಹಿಮಪಾತ ಸಂಭವಿಸಿದ ಹಿನ್ನೆಲೆಯಲ್ಲಿ ಧೌಲಿಗಂಗಾ ನದಿಯಲ್ಲಿ ನೀರಿನ ಮಟ್ಟ ಹಠಾತ್ತನೆ ಏರಿಕೆಯಾಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದ್ದು, 150ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಈ ಪ್ರವಾಹದಿಂದಾಗಿ ಅನೇಕ ನದಿ ತೀರಗಳ ಅಂಚಿನಲ್ಲಿರುವ ಮನೆಗಳನ್ನು ನಾಶಪಡಿಸಿದೆ. ಹಿಮಪಾತದಲ್ಲಿ ಸಿಲುಕಿರುವ ಸಂತ್ರಸ್ತರ ರಕ್ಷಣೆಗಾಗಿ ನೂರಾರು ಐಟಿಬಿಪಿ ಸಿಬ್ಬಂದಿ ಕಾರ್ಯಚರಣೆ ಮಾಡುತ್ತಿದ್ದಾರೆ.
Advertisement
#WATCH | Water level in Dhauliganga river rises suddenly following avalanche near a power project at Raini village in Tapovan area of Chamoli district. #Uttarakhand pic.twitter.com/syiokujhns
— ANI (@ANI) February 7, 2021
Advertisement
ಧೌಲಿಗಂಗಾ ನದಿಯ ದಡದಲ್ಲಿರುವ ಹಳ್ಳಿಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸುವಂತೆ ಚಮೋಲಿ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ತೆರಳಿ ಪರಿಶೀಲನೆ ಮಾಡುತ್ತಿದ್ದಾರೆ.
Advertisement
A disaster has been reported from Chamoli district. The district administration, police and disaster management departments have been directed to deal with the situation. Do not pay attention to any kind of rumours. Govt is taking all necessary steps: Uttarakhand CM TS Rawat
— ANI (@ANI) February 7, 2021
Advertisement
ಚಮೋಲಿ ಜಿಲ್ಲೆಯಲ್ಲಿ ನಡೆದಿರುವ ಘಟನೆ ತಿಳಿಯಿತು. ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ. ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ, ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ.