ಲಕ್ನೋ: ಸ್ನಾತಕೋತ್ತರ ಮೆಡಿಕಲ್ ಓದಿ ಕೊನೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಲು ನಿರಾಕರಿಸುತ್ತಿರುವ ವಿದ್ಯಾರ್ಥಿಗಳಿಗೆ ಉತ್ತರ ಪ್ರದೇಶ ಸರ್ಕಾರ ಬಿಸಿ ಮುಟ್ಟಿಸಿದೆ.
ಇನ್ನು ಮುಂದೆ ಉತ್ತರ ಪ್ರದೇಶದಲ್ಲಿ ಸ್ನಾತಕೋತ್ತರ ವೈದ್ಯ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ 10 ವರ್ಷ ಸೇವೆ ಸಲ್ಲಿಸಬೇಕಾಗುತ್ತದೆ. ಒಂದು ವೇಳೆ ಆದೇಶವನ್ನು ಉಲ್ಲಂಘನೆ ಮಾಡಿದರೆ 1 ಕೋಟಿ ರೂ. ದಂಡವನ್ನು ಪಾವತಿಸಬೇಕಾಗುತ್ತದೆ.
Advertisement
ರಾಜ್ಯ ಸರ್ಕಾರದ ಆರೋಗ್ಯ ಕಾರ್ಯದರ್ಶಿ ಅಮಿತ್ ಮೋಹನ್ ಈ ನಿರ್ಧಾರವನ್ನು ತಿಳಿಸಿದ್ದು, ಯಾರಾದರೂ ಸ್ನಾತಕೋತ್ತರ ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿದರೆ ಮೂರು ವರ್ಷ ಅವರನ್ನು ಪಿಜಿ ಶಿಕ್ಷಣದಿಂದ ಡಿಬಾರ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Advertisement
Advertisement
ಸರ್ಕಾರಿ ಕೋಟಾದಲ್ಲಿ ಓದಿದ ಮೆಡಿಕಲ್ ವಿದ್ಯಾರ್ಥಿಗಳು 2 ವರ್ಷ ಕಾಲ ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವಂತೆ 2018ರಲ್ಲಿ ಮಾರ್ಗಸೂಚಿ ಪ್ರಕಟಿಸಿತ್ತು. ಈ ಮಾರ್ಗಸೂಚಿಯನ್ನು ಉಲ್ಲಂಘನೆ ನಡೆದರೆ ಎಂಬಿಬಿಎಸ್/ಬಿಡಿಎಸ್ ವಿದ್ಯಾರ್ಥಿಗಳಿಗೆ 10 ಲಕ್ಷ, ಎಂಡಿ/ ಎಂಎಸ್ ವಿದ್ಯಾರ್ಥಿಗಳಿಗೆ 40 ಲಕ್ಷ, ಪಿಜಿ ಡಿಪ್ಲೋಮಾ/ಎಂಡಿಎಸ್ ವಿದ್ಯಾರ್ಥಿಗಳು 20 ಲಕ್ಷ ದಂಡವನ್ನು ಪಾವತಿಸಬೇಕಿತ್ತು.
Advertisement
ಕೇಂದ್ರ ಸರ್ಕಾರದ ನಿಯಮದ ಅನ್ವಯ ಸರ್ಕಾರಿ ಕಾಲೇಜುಗಳಲ್ಲಿ ಪದವಿ ಪಡೆದ ಡಿಗ್ರಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ವೈದ್ಯ ಸೇವೆಗೆ ಸೇರುವ ಮೊದಲು 1 ವರ್ಷ ಗ್ರಾಮೀಣ ಭಾಗದ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವುದನ್ನು ಕಡ್ಡಾಯ ಮಾಡಲಾಗಿದೆ.
Anyone leaving the course in between will be debarred from the PG degree course for the next three years: Amit Mohan Prasad, Principal Health Secretary https://t.co/Bd0tSSf6fD
— ANI UP/Uttarakhand (@ANINewsUP) December 12, 2020
ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆಯನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಎಂಬಿಬಿಎಸ್ ಓದಿದ ವಿದ್ಯಾರ್ಥಿಗಳು ಸರ್ಕಾರಿ ಸೇವೆಗೆ ಹಾಜರಾಗಾದೇ ದಂಡವನ್ನು ಪಾವತಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಉದ್ಯೋಗಕ್ಕೆ ಸೇರಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಪ್ರವೇಶ ಪಡೆಯುವುದಕ್ಕೆ ಮುನ್ನವೇ ಗ್ರಾಮೀಣ ಭಾಗದಲ್ಲಿ ಸೇವೆ ಮಾಡುತ್ತೇನೆ ಎಂದು ಬಾಂಡ್‌ಗೆ ಸಹಿ ಹಾಕಿದ ವಿದ್ಯಾರ್ಥಿಗಳಿಗೆ ಮಾತ್ರ ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ನೀಡಲಾಗುತ್ತದೆ.