ಉಪಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್

Public TV
1 Min Read
SHRINIVASMANE AND THASHILDAR

ಹಾವೇರಿ: ಬಿಜೆಪಿ ಶಾಸಕ ಸಿ.ಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನೇತೃತ್ವದಲ್ಲಿ ಕೆಲವು ಕಾಂಗ್ರೆಸ್ ಕಾರ್ಯರ್ತರು ಮತ್ತು ಮುಖಂಡರ ನಿನ್ನೆ ಸಭೆ ನಡೆಸಿದ್ದಾರೆ.

CONGRESS METTING medium

ಹಾನಗಲ್ ತಾಲೂಕಿನವರಿಗೆ ಪಕ್ಷದ ಟಿಕೆಟ್ ನೀಡುವಂತೆ ಸಭೆಯಲ್ಲಿ ಒತ್ತಾಯ ಮಾಡಿದ್ದು, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆಗೆ ಪಕ್ಷದ ಟಿಕೆಟ್ ನೀಡದಂತೆ ಪರೋಕ್ಷವಾಗಿ ಒತ್ತಾಯ ಕೇಳಿಬಂದಿದೆ. ಹಾನಗಲ್ ತಾಲೂಕಿನ ಯಾರಿಗಾದರೂ ಟಿಕೆಟ್ ನೀಡುವಂತೆ ಗ್ರಾಮ ಮಟ್ಟದಿಂದ ಹೋರಾಟ ಮಾಡಲು ನಿರ್ಧಾರ ಮಾಡಿದ್ದಾರೆ. ತಾಲೂಕಿನವರನ್ನು ಬಿಟ್ಟು ಪಕ್ಷ ಬೇರೆಯವರಿಗೆ ಟಿಕೆಟ್ ನೀಡಿದ್ದೇ ಆದರೆ ಉಗ್ರ ಹೋರಾಟ ಮಾಡುತ್ತೇವೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಆಗೋ ಪ್ರಶ್ನೆಯೇ ಇಲ್ಲ ಎಂದು ಹೈಕಮಾಂಡ್‍ಗೆ ಮನೋಹರ್ ತಹಶೀಲ್ದಾರ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಾವೇರಿ ನಿರ್ದೇಶಕನಿಗೆ ದಾದಾಸಾಹೇಬ್ ಫಾಲ್ಕೆ ಜ್ಯೂರಿ ಪ್ರಶಸ್ತಿ

CONGRESS medium

ಕಳೆದ ವಿಧಾನಸಭಾ ಚುನಾವಣೆ ವೇಳೆ ಮನೋಹರ್ ತಹಶೀಲ್ದಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಸೋಲಿನ ನಂತರವೂ ಕ್ಷೇತ್ರದಲ್ಲಿ ಮನೆ ಮಾಡಿಕೊಂಡು ಸಂಘಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ತೊಡಗಿಕೊಂಡಿದ್ದಾರೆ. ಕಾಂಗ್ರೆಸ್ ಟಿಕೆಟ್‍ಗೆ ಮನೋಹರ್ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ಸೇರಿದಂತೆ ಹಲವು ಮುಖಂಡರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *