ಬೆಂಗಳೂರು: ಕಾಂಗ್ರೆಸ್-ಜೆಡಿಎಸ್‍ನಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಸೂಕ್ತ ಅಭ್ಯರ್ಥಿಗಳು ಇಲ್ಲದ ಕಾರಣ, ಡಿಕೆ ರವಿ ಪತ್ನಿ ಕುಸುಮಾರನ್ನು ಕಣಕ್ಕಿಳಿಸಿ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಒಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ, ಮತ್ತೊಂದೆಡೆ ಡಿಕೆ ಬ್ರದರ್ಸ್ ಕೂಡ ಪ್ರಯತ್ನ ಮಾಡ್ತಿದ್ದಾರೆ ಎಂದು ತಿಳಿದುಬಂದಿದೆ.
Advertisement
ಈ ಬೆಳವಣಿಗೆ ನಡುವೆ ಡಿಕೆ ರವಿ ಪತ್ನಿ ಕುಸುಮಾ ತಂದೆ ಹನುಮಂತರಾಯಪ್ಪ ಜೊತೆಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿರೋದು ಕುತೂಹಲ ಮೂಡಿಸಿದೆ. ಸಂಸದ ಡಿಕೆ ಸುರೇಶ್, ಆರ್ ಆರ್ ನಗರದ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹಿಸುವ ಕೆಲಸ ಮಾಡಿದ್ದಾರೆ.
Advertisement
Advertisement
ಸಭೆ ಬಳಿಕ ಮಾತನಾಡಿದ್ದ ಡಿಕೆ ಸುರೇಶ್, ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗೋ ಸಮರ್ಥರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತೇವೆ. ಕುಸುಮಾ ರವಿ ಹೆಸರು ಪ್ರಸ್ತಾಪವಾಗ್ತಿದೆ. ಆದರೆ ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ. ಇತ್ತ ಜೆಡಿಎಸ್ ಜೊತೆ ಮೈತ್ರಿಯಿಲ್ಲ ಎಂದ ಸಿದ್ದರಾಮಯ್ಯಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈತ್ರಿಗೆ ಕಾಂಗ್ರೆಸ್ ಯೋಗ್ಯವಾದ ಪಕ್ಷವಲ್ಲ. ನಾವ್ಯಾರು ಕಾಂಗ್ರೆಸ್ ಮನೆ ಬಾಗಿಲಿಗೆ ಹೋಗಿಲ್ಲ ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದರು.
Advertisement
ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಮಾಜಿ ಶಾಸಕ ಮುನಿರತ್ನಗೆ ಟಿಕೆಟ್ ನೀಡಲೇಬೇಕೆಂದು ನಿನ್ನೆ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರು.