ಬೆಂಗಳೂರು: ಕೆಲಸ ಮಾಡುತ್ತಿದ್ದ ಹೊರ ಗುತ್ತಿಗೆಯ ಮೂವರು ಕಾರ್ಮಿಕರು ಮ್ಯಾನ್ ಹೋಲ್‍ನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಇದಕ್ಕೆ ಎಚ್ ಡಿ ಕುಮಾರಸ್ವಾಮಿ ತೀವ್ರ ಸಂತಾಪವನ್ನ ವ್ಯಕ್ತಪಡಿಸಿದ್ದಾರೆ.
Advertisement
ಈ ದುರ್ಘಟನೆ ನಡೆದಿರುವುದು ಅತ್ಯಂತ ದುರ್ದೈವದ ಸಂಗತಿ. ಇದಕ್ಕಾಗಿ ತೀವ್ರ ಕಂಬನಿ ಮಿಡಿಯುತ್ತೇವೆ. ಇದೊಂದು ಮನಕಲಕುವ ಸರಣಿ ಸಾವಾಗಿದೆ. ಬೇಜವಾಬ್ದಾರಿತನದಿಂದ ಗುತ್ತಿಗೆ ಕಾರ್ಮಿಕರ ಸಾವಿಗೆ ಕಾರಣನಾದ ಗುತ್ತಿಗೆದಾರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ರಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ನೀರಿಲ್ಲ, ನೀರು ತರಲು ಬಿಡ್ತಿಲ್ಲ – ಯುವಕನ ಅಳಲು
Advertisement
ಜೀವನ ನಿರ್ವಹಣೆಗಾಗಿ ಲಾಕ್‍ಡೌನ್ ಲೆಕ್ಕಿಸದೆ ಕೆಲಸ ಮಾಡುತ್ತಿದ್ದ ಮೂವರು ಕೂಲಿ ಕಾರ್ಮಿಕರ ಸಾವನ್ನಪ್ಪಿದ್ದಾರೆ. ನಿರ್ಮಾಣ ಹಂತದ ಮ್ಯಾನ್ ಹೋಲ್ ಒಳಗೆ ಇಳಿದ ಮೂವರು ಕಾರ್ಮಿಕರು ಉಸಿರು ಗಟ್ಟಿ ಸಾವನ್ನಪ್ಪಿದ್ದಾರೆ. ರಾಮನಗರದ ಐಜೂರು ಬಳಿಯ ನೇತಾಜಿ ಪಾಪೂಲರ್ ಶಾಲೆ ಮುಂಭಾಗದಲ್ಲಿ ಈ ದುರ್ಘಟನೆ ನಡೆದಿತ್ತು. ಈ ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ರಾಮನಗರ ಜಿಲ್ಲಾ ಆಸ್ಪತ್ರೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಪರಿಸ್ಥಿತಿ ಸುಧಾರಣೆಯಾದ್ರೆ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ – ಸಿಎಂ ಬಿಎಸ್‍ವೈ
Advertisement
Advertisement
ಎಸ್‍ಪಿ ಕಚೇರಿಗೆ ಭೇಟಿ ನೀಡಿ ಘಟನೆ ಬಗ್ಗೆ ಎಸ್ಪಿ ಅವರಿಂದ ನಿಖಿಲ್ ಕುಮಾರಸ್ವಾಮಿ ಮಾಹಿತಿ ಪಡೆದಿದ್ದಾರೆ. ಕಾರ್ಮಿಕರ ಸಾವಿನಿಂದ ಅವರ ಕುಟುಂಬ ವರ್ಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಸರ್ಕಾರದಿಂದ ಪರಿಹಾರಕ್ಕೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.