ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾದ ಪ್ರಾಣೇಶ್ ಎಂಕೆ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ಪ್ರಾಣೇಶ್ ತಮ್ಮ ಫೇಸ್‍ಬುಕ್ ನಲ್ಲಿ ಹಂಚಿಕೊಂಡಿದ್ದು, ಶೀಘ್ರದಲ್ಲೆ ನಾವು ಗುಣಮುಖರಾಗಿ ಬರುತ್ತೇವೆ ಎಂದು ಹೇಳಿದ್ದಾರೆ.
ಫೇಸ್‍ಬುಕ್ ಪೋಸ್ಟ್: ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿಯು ನಿನ್ನೆ ಸಂಜೆ ಬಂದಿದ್ದು, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈಗಾಗಲೇ ನಾವು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದೇವೆ. ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ, ಶೀಘ್ರದಲ್ಲೆ ನಾವು ಗುಣಮುಖರಾಗಿ ಬರುತ್ತೇವೆ.
ಈ ವಿಷಯ ತಿಳಿದು ಎಲ್ಲರೂ ನನ್ನನ್ನು ಸಂಪರ್ಕ ಮಾಡಲು ಪ್ರಯತ್ನಿಸುತ್ತಿದ್ದು, ಚಿಕಿತ್ಸೆ ಪಡೆಯುತ್ತಿರುವ ಕಾರಣ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಆಶೀರ್ವಾದದ ಹಾರೈಕೆಗೆ ಆಭಾರಿಯಾಗಿದ್ದೇನೆ. ನಾನು ನನ್ನ ಕುಟುಂಬ ಸದಾ ನಿಮ್ಮಗೆಲ್ಲ ಚಿರಋಣಿಯಾಗಿರುತ್ತೇವೆ ಎಂದು ಬರೆದುಕೊಂಡಿದ್ದಾರೆ.