ಎಚ್.ಎಂ.ರೇವಣ್ಣ ಸಾಂಸ್ಕೃತಿಕ ಪ್ರತಿಷ್ಠಾನ – ಅಭಿನಂದನೆ, ಗೃಂಥಗಳ ಬಿಡುಗಡೆ ಸಮಾರಂಭ

Public TV
1 Min Read
H M Revanna 3

ಬೆಂಗಳೂರು : ಐದು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿದ್ದು ಸಮಾಜದ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿರುವ ಹಿರಿಯ ಜನನಾಯಕ ಎಚ್.ಎಂ.ರೇವಣ್ಣ ಅವರ ಜೀವನ ಮತ್ತು ಸಾಧನೆಗಳ ವಿವರಗಳುಳ್ಳ ಪರಿಚಯ ಗ್ರಂಥ, ಅವರ ಜೀವನದ ಪ್ರಮುಖ ಘಟಕಗಳ ದಾಖಲೆ ಹೊಂದಿರುವ ಚಿತ್ರಕೋಶ ಮತ್ತು ಅವರ ವ್ಯಕ್ತಿತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ನಿರ್ಮಿಸಿದ ಸಾಕ್ಷ್ಯಚಿತ್ರವನ್ನು ಮಾರ್ಚ್ 21 ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮೈಸೂರು ರಸ್ತೆಯ ಪೂರ್ಣಿಮಾ ಪ್ಯಾಲೇಸ್ ಕನ್ ವೆನ್ಷನ್ ಸೆಂಟರ್ ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಇದೇ ಸಂದರ್ಭದಲ್ಲಿ ರೇವಣ್ಣ ಅವರ ಐದು ದಶಕಗಳ ಸೇವೆಯನ್ನು ಸಾರ್ವಜನಿಕ ವಾಗಿ ಅಭಿನಂದಿಸಲಾಗುತ್ತದೆ.

H M Revanna 1

ಮಾಜಿ ಮುಖ್ಯಮಂತ್ರಿ ಮತ್ತು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಂ.ವೀರಪ್ಪ ಮೊಯಿಲಿ ಅವರು ಅಧ್ಯಕ್ಷತೆ ವಹಿಸುವರು.

‘ಸಂಗತ’ ಗ್ರಂಥವನ್ನು ಮಾಜಿ ರಾಜ್ಯಪಾಲರು ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಡುಗಡೆ ಮಾಡಲಿದ್ದಾರೆ. ‘ದೃಶ್ಯಯಾನ’ ಚಿತ್ರಗುಚ್ಛವನ್ನು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಮತ್ತು ಮಾಜಿ ಕೇಂದ್ರ ಸಚಿವರಾದ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಲೋಕಾರ್ಪಣೆ ಮಾಡುವರು. ‘ಇಟ್ಟ ಹೆಜ್ಜೆ ದಿಟ್ಟ ನಿಲುವು’ ಕಿರುಚಿತ್ರವನ್ನು ಕರ್ನಾಟಕ ವಿಧಾನ ಪರಿಷತ್ ನ ಸಭಾಪತಿ ಬಸವರಾಜ್ ಹೊರಟ್ಟಿ ಬಿಡುಗಡೆಗೊಳಿಸುವರು. ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಶಾಸಕ ಶ್ರೀರಾಮಲಿಂಗಾರೆಡ್ಡಿ ಅವರು ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲ್ಲಿದ್ದಾರೆ.

H M Revanna

ಕಮ್ಯುನಿಟಿ ಸೆಂಟರ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಕೆ.ಎಂ.ನಾಗರಾಜ್ ಹಾಗೂ ಹಿರಿಯ ಕವಿ ಹಾಗೂ ವಿಧಾನ ಪರಿಷತ್ ನ ಮಾಜಿ ಸದಸ್ಯ ಡಾ.ಸಿದ್ದಲಿಂಗಯ್ಯ ಅವರು ಅಭಿನಂದನಾ ನುಡಿಗಳನ್ನು ಆಡುವರು. ಮಾಜಿ ಸಚಿವೆ ಮತ್ತು ಹಿರಿಯ ಸಾಹಿತಿ ಡಾ.ಬಿ.ಟಿ.ಲಲಿತಾ ನಾಯಕ್ ಅವರು ಗ್ರಂಥ ಪರಿಚಯ ಮಾಡಿಕೊಡಲಿದ್ದಾರೆ. ಸಮಾರಂಭದಲ್ಲಿ ಗ್ರಂಥ ಸಂಪಾದಕರುಗಳಾದ ಕಾ.ತ.ಚಿಕ್ಕಣ್ಣ ಮತ್ತು ಲಕ್ಷ್ಮಣ ಕೊಡಸೆ, ಕಿರುಚಿತ್ರ ನಿರ್ದೇಶಕ ಹುಲಿ ಚಂದ್ರಶೇಖರ ಉಪಸ್ಥಿತ ಇರಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *