– ಪರೀಕ್ಷೆ ಬರೆಯಬೇಕಿದ್ದ ಅಭ್ಯರ್ಥಿಗಳು ಅರೆಸ್ಟ್
– ಬಂಧಿತರ ಸಂಖ್ಯೆ 14ಕ್ಕೆ ಏರಿಕೆ
ಬೆಂಗಳೂರು: ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳ(ಎಫ್‌ಡಿಎ) ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಬಂಧನಕ್ಕೊಳಗಾದ ಆರೋಪಿಗಳ ವಿಚಾರಣೆಯ ವೇಳೆ ಸ್ಫೋಟಕ ವಿಚಾರಗಳು ಹೊರಬರುತ್ತಿವೆ.
ಸಿಸಿಬಿ ಪೊಲೀಸರು ಶನಿವಾರ ಈ ಪ್ರಕರಣದ ಸಂಬಂಧ 6 ಮಂದಿಯನ್ನು ಬಂಧಿಸಿದ್ದರು. ನಿನ್ನೆ ರಾತ್ರಿ ಮತ್ತು ಇಂದು ಒಟ್ಟು 8 ಮಂದಿಯನ್ನು ಬಂಧಿಸಿದ್ದು, ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಈ ಪೈಕಿ ಹಲವು ಮಂದಿ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ.
Advertisement
Advertisement
ಬಂಧಿತರಿಂದ ಒಟ್ಟು 36 ಲಕ್ಷ ನಗದು ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಬಂಧಿತರ ಪೈಕಿ ಕೆಲವರು ಅಭ್ಯರ್ಥಿಗಳಾಗಿರುವುದು ವಿಶೇಷ.
Advertisement
ಕೆಪಿಎಸ್‌ಸಿಯಿಂದಲೇ ಸೋರಿಕೆ: ಈ ಕೃತ್ಯದ ಹಿಂದೆ ಇಬ್ಬರ ಮೇಲೆ ಸಿಸಿಬಿಗೆ ಬಲವಾದ ಅನುಮಾನವಿದೆ. ಈ ಪ್ರಕರಣ ಬೆಳಕಿಗೆ ಬಂದ ನಂತರ ಎಫ್‌ಡಿಎ ದರ್ಜೆಯ ಇಬ್ಬರು ಅಧಿಕಾರಿಗಳ ಮೊಬೈಲ್ ಸ್ವಿಚ್ ಆಫ್ ಆಗಿದ್ದು ನಾಪತ್ತೆಯಾಗಿದ್ದಾರೆ. ಬಂಧಿತರು ನೀಡಿದ ಮಾಹಿತಿಯ ಮೇರೆಗೆ ಇಬ್ಬರನ್ನು ವಿಚಾರಣೆ ನಡೆಸಲು ಸಿಸಿಬಿ ಮುಂದಾಗಿತ್ತು. ಆದರೆ ಆರೋಪಿಗಳ ಬಂಧನ ಸುದ್ದಿ ಪ್ರಕಟವಾಗುತ್ತಿದ್ದಂತೆ ಇಬ್ಬರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಈ ಇಬ್ಬರಿಂದಲೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿರಬಹುದು ಎಂಬ ಅನುಮಾನ ಸಿಸಿಬಿಯದ್ದು.
Advertisement
ಇಂದು ಎಫ್‌ಡಿಎ ಪರೀಕ್ಷೆ ನಡೆಯಬೇಕಿತ್ತು. ಆದರೆ ಪರೀಕ್ಷೆ ನಡೆಯುವ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸರ್ಕಾರ ಪರೀಕ್ಷೆಯನ್ನು ಮುಂದೂಡಿದೆ.