ಹಾವೇರಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಸಹ ದಿನದಿಂದ ದಿನಕ್ಕೆ ಪ್ರಕಣಗಳು ಹೆಚ್ಚಾಗುತ್ತಿದ್ದು, ಮಹಾಮಾರಿ ಆರ್ಭಟಕ್ಕೆ ಇಂದು ಮೊದಲ ಬಲಿಯಾಗಿದೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಜಿಲ್ಲೆಯ ಸವಣೂರು ಮೂಲದ 75 ವರ್ಷದ ವೃದ್ಧ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆಯನ್ನು ಮಾಡಲಾಗಿದೆ.
ಇಂದು ಜಿಲ್ಲೆಯಲ್ಲಿ 7 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಹಾವೇರಿ ತಾಲೂಕಿನಲ್ಲಿ 3, ಶಿಗ್ಗಾಂವಿ ತಾಲೂಕಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬ್ಯಾಡಗಿ ಮತ್ತು ರಾಣೆಬೆನ್ನೂರು ತಾಲೂಕಿನಲ್ಲಿ ತಲಾ ಒಬ್ಬರಲ್ಲಿ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ 33 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಘವೇಂದ್ರಸ್ವಾಮಿ ಎಚ್.ಎಸ್ ಮಾಹಿತಿ ನೀಡಿದ್ದಾರೆ.